ನವದೆಹಲಿ (ಪಿಟಿಐ): ಸಂಸತ್ ಸದಸ್ಯರ ಅನುಮೋದನೆ ಇಲ್ಲದೇ `ಆಧಾರ್' ಯೋಜನೆ ಅನುಷ್ಠಾನ ಗೊಳಿಸಲಾಗುತ್ತಿದೆ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಈ ಕುರಿತು ಕೇಂದ್ರ ಸರ್ಕಾರದಿಂದ ವಿವರಣೆ ಕೇಳಿದೆ.

ಕರ್ನಾಟಕ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಕೆ.ಎಸ್.ಪುಟ್ಟಸ್ವಾಮಿ ಮತ್ತು ವಕೀಲ ಪರ್ವೇಶ್ ಖನ್ನಾ ಅವರು ಸರ್ಕಾರದ ನಿರ್ಧಾರವನ್ನು ಪ್ರಶಿಸಿ ಸುಪ್ರೀಂ ಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಇದರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಅಲ್ತಮಸ್ ಕಬೀರ್ ಮತ್ತು ನ್ಯಾಯಮೂರ್ತಿ ಜೆ.ಚೆಲ್ಮೇಶ್ವರ್ ಅವರನ್ನೊಳಗೊಂಡ ನ್ಯಾಯಪೀಠ, ಕೇಂದ್ರ ಹಣಕಾಸು ಸಚಿವಾಲಯ, ಯೋಜನಾ ಆಯೋಗ ಮತ್ತು ಭಾರತೀಯ ವಿಶಿಷ್ಟ ಗುರುತಿನ ಸಂಖ್ಯೆ ಪ್ರಾಧಿಕಾರದಿಂದ ಪ್ರತಿಕ್ರಿಯೆ ಕೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.