ಮಂಗಳವಾರ, ಜನವರಿ 21, 2020
28 °C

ಆನೆಗಳ ಸಾವು: ಮಾಹಿತಿ ಕೇಳಿದ ಹೈಕೋರ್ಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿದ್ಯುತ್ ತಂತಿ ಬೇಲಿಗೆ ತಗುಲಿ ಹಾಸನ, ಕೊಡಗು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಆನೆಗಳು ಸಾವನ್ನಪ್ಪುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್, ಇಂತಹ ಬೇಲಿಗಳ ವಸ್ತುಸ್ಥಿತಿ ಬಗ್ಗೆ ಮಾಹಿತಿ ನೀಡುವಂತೆ ತಜ್ಞರ ಸಮಿತಿಗೆ ಸೂಚಿಸಿದೆ.ಆನೆ ಹಾಗೂ ಮನುಷ್ಯರ ನಡುವೆ ಪರಸ್ಪರ ನಡೆಯುತ್ತಿರುವ ಸಂಘರ್ಷವನ್ನು ತಪ್ಪಿಸುವ ನಿಟ್ಟಿನಲ್ಲಿ ತಜ್ಞರನ್ನು ಒಳಗೊಂಡ ಕಾರ್ಯಪಡೆಯನ್ನು ರಚನೆ ಮಾಡಿರುವ ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ಹಾಗೂ ನ್ಯಾಯಮೂರ್ತಿ ಬಿ.ವಿ.ನಾಗರತ್ನಾ ಅವರನ್ನು ಒಳಗೊಂಡ ವಿಭಾಗೀಯ ಪೀಠ ಈ ಸೂಚನೆಯನ್ನು ಅವರಿಗೆ ನೀಡಿದೆ. ಈ ಬಗ್ಗೆ ಪರಿಶೀಲನೆ ನಡೆಸಿ ಕೋರ್ಟ್‌ಗೆ ವರದಿ ನೀಡುವಂತೆ ಪೀಠ ಆದೇಶಿಸಿದೆ. ಐಐಎಸ್‌ಸಿಯ ಪರಿಸರ ವಿಜ್ಞಾನ ಕೇಂದ್ರದ ಅಧ್ಯಕ್ಷ ಡಾ. ಾಮನ್ ಸುಕುಮಾರ್ ನೇತೃತ್ವದಲ್ಲಿ ಆನೆ ತಜ್ಞರ ಕಾರ್ಯಪಡೆಯನ್ನು ಪೀಠ ರಚನೆ ಮಾಡಿದೆ.`ಖಾಸಗಿ ಜಮೀನುಗಳನ್ನು ಸ್ವಾಧೀನ ಪಡಿಸಿಕೊಳ್ಳುವ ಮೂಲಕ ಆನೆಗಳ ಸಂತತಿ ಹೆಚ್ಚಿಸಬಹುದೇ, ಆನೆ ರಕ್ಷಿಸುವ ನಿಟ್ಟಿನಲ್ಲಿ ನಿಜವಾಗಿಯೂ ಅದರ ಸ್ಥಳಾಂತರ ಅಗತ್ಯ ಇದೆಯೇ ಇತ್ಯಾದಿಗಳ ಬಗ್ಗೆ ಪರಿಶೀಲನೆ ನಡೆಸಿ ಮಾಹಿತಿ ನೀಡಿ~ ಎಂದು ನ್ಯಾಯಪೀಠ ಆದೇಶಿಸಿದೆ.

ಪ್ರತಿಕ್ರಿಯಿಸಿ (+)