ಶುಕ್ರವಾರ, ಫೆಬ್ರವರಿ 26, 2021
29 °C

ಆನೆ ಹಾವಳಿ: ಬೆಳೆ ನಾಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಆನೆ ಹಾವಳಿ: ಬೆಳೆ ನಾಶ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿಯ ಬೆಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಗಳಿ ಗ್ರಾಮದಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳು ಜೋಳ, ಭತ್ತ, ಕಾಫಿ, ಬಾಳೆ ಹಾಗೂ ಇನ್ನಿತರ ಬೆಳೆಗಳನ್ನು ತಿಂದು, ತುಳಿದು ನಾಶಪಡಿಸಿರುವ ಘಟನೆ ಶುಕ್ರವಾರ ನಡೆದಿದೆ.ಕೆಲ ದಿನಗಳಿಂದ ಹೇಮಾವತಿ ನದಿ ಹಿನ್ನೀರು ಪ್ರದೇಶದಲ್ಲಿ 20 ಕಾಡಾನೆಗಳು ಬೀಡು ಬಿಟ್ಟಿವೆ. ಪ್ರತಿದಿನ 2ರಿಂದ 4 ಆನೆಗಳ ಗುಂಪು ಬೆಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಭಂಡಾರ, ಕೋಣಿಗನಹಳ್ಳಿ ಆಗಳಿ, ನಿಲುವಾಗಿಲು, ಕಟ್ಟೆಪುರ, ಹಿಪ್ಪುಗಳಲೆ ಇತರ ಗ್ರಾಮಗಳಲ್ಲಿ ಕಾಣಿಸಿಕೊಳ್ಳುತ್ತಿವೆ.ಅರಣ್ಯ ಇಲಾಖೆ ಸಿಬ್ಬಂದಿ ಆನೆಗಳನ್ನು ಕಾಡಿಗಟ್ಟಲು ದಿನವಿಡೀ ಕಾರ್ಯಾಚರಣೆ ನಡೆಸುತ್ತಿರುವರಾದರೂ ಗ್ರಾಮಸ್ಥರ ಗದ್ದಲದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ವಿಫಲವಾಗುತ್ತಿದೆ. ನಿತ್ಯ ಕಾಡಾನೆಗಳ ದರ್ಶನದಿಂದ ಗ್ರಾಮಸ್ಥರು ಭಯಬೀತರಾಗಿ ದಿನಗಳೆಯುವಂತಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.