ಶುಕ್ರವಾರ, ಏಪ್ರಿಲ್ 16, 2021
31 °C

ಆನೇಕಲ್ ಪಟ್ಟಣ ಪುರಸಭೆ : ಉಪಾಧ್ಯಕ್ಷರಾಗಿ ಬಿ.ಪಿ.ಮರಿಯಪ್ಪ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಆನೇಕಲ್: ಪಟ್ಟಣದ ಪುರಸಭೆಯ ಉಪಾಧ್ಯಕ್ಷರಾಗಿ ಬಿಜೆಪಿಯ ಬಿ.ಪಿ.ಮರಿಯಪ್ಪ ಅವಿರೋಧ ಆಯ್ಕೆಯಾಗಿದ್ದಾರೆ.

ಪುರಸಭಾ ಉಪಾಧ್ಯಕ್ಷರಾಗಿದ್ದ ಶ್ರೀನಿವಾಸ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಬುಧವಾರ ಚುನಾವಣೆ ನಿಗದಿಯಾಗಿತ್ತು. ಬಿ.ಪಿ.ಮರಿಯಪ್ಪ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆಯಾದರು. ತಹಶೀಲ್ದಾರ್ ಎಚ್.ಎನ್.ಶಿವೇಗೌಡ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು.ಆಯ್ಕೆ ನಂತರ ಮಾತನಾಡಿದ ನೂತನ ಉಪಾಧ್ಯಕ್ಷ ಬಿ.ಪಿ.ಮರಿಯಪ್ಪ, ಪಟ್ಟಣದ ನೀರಿನ ಸಮಸ್ಯೆ ನಿವಾರಣೆಗೆ ಶ್ರಮಿಸುವುದಾಗಿ ತಿಳಿಸಿದರು. ಈ ನಿಟ್ಟಿನಲ್ಲಿ ಸಚಿವರ ಮಾರ್ಗದರ್ಶನ ಪಡೆದು ಹೆಚ್ಚಿನ ಅನುದಾನ ಬಿಡುಗಡೆಗೆ ಮನವಿ ಸಲ್ಲಿಸಲಾಗುವುದು. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುವುದು ಎಂದರು.ನೂತನ ಉಪಾಧ್ಯಕ್ಷರನ್ನು ಸಮಾಜ ಕಲ್ಯಾಣ ಸಚಿವ ಎ.ನಾರಾಯಣ ಸ್ವಾಮಿ, ಕಿಯೋನಿಕ್ಸ್ ಅಧ್ಯಕ್ಷ ಯಂಗಾರೆಡ್ಡಿ, ಬಿಜೆಪಿ ತಾಲ್ಲೂಕು ಅಧ್ಯಕ್ಷ ಎನ್.ಬಸವರಾಜು, ಅಧ್ಯಕ್ಷೆ ಉಮಾಗೋಪಿ, ಬಿ.ನಾಗರಾಜು, ಕೆ.ನಾಗರಾಜು, ಎ.ಉದಯ್ ಕುಮಾರ್, ಶ್ರೀನಿವಾಸ್, ಸಿ.ಮುನಿರಾಜು, ಡಿ.ವೆಂಕಟೇಶ್, ಪಿ.ರಾಜು, ಡಿ.ವಿ.ಮುರುಳಿ,  ಶಿವರಾಮ್ ಇತರರು ಅಭಿನಂದಿಸಿದರು. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.