ಆನ್‌ಲೈನ್ ಮೂಲಕ ಪಡಿತರ ಚೀಟಿ

7

ಆನ್‌ಲೈನ್ ಮೂಲಕ ಪಡಿತರ ಚೀಟಿ

Published:
Updated:

ಬೆಂಗಳೂರು: ನೂತನ ಪಡಿತರ ಚೀಟಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ವ್ಯವಸ್ಥೆಯನ್ನು ಶೀಘ್ರ ಪುನರಾರಂಭಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಕಾರ್ಯದರ್ಶಿ ಬಿ.ಎ. ಹರೀಶ್ ಗೌಡ ತಿಳಿಸಿದರು.ಇಲಾಖೆಯ ವೆಬ್‌ಸೈಟ್‌ನಲ್ಲಿ (http://ahara.kar.nic.in) ಕಲ್ಪಿಸಲಾಗಿರುವ ಆನ್‌ಲೈನ್ ಮೂಲಕ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವ ತಂತ್ರಾಂಶದಲ್ಲಿ ಬದಲಾವಣೆ ತರಲಾಗುತ್ತಿದೆ. ತಂತ್ರಾಂಶದಲ್ಲಿ ಹೆಚ್ಚಿನ ಸೌಲಭ್ಯ ಅಳವಡಿಸುವ ಕಾರ್ಯ ಚಾಲ್ತಿಯಲ್ಲಿದೆ ಎಂದು ಅವರು `ಪ್ರಜಾವಾಣಿ~ಗೆ ಮಾಹಿತಿ ನೀಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry