ಶುಕ್ರವಾರ, ಫೆಬ್ರವರಿ 26, 2021
29 °C
ಸಂಸತ್‌ ಭವನದ ಸಮೀಪ ಕಾರ್‌ ಬಾಂಬ್‌ ಸ್ಫೋಟ

ಆಫ್ಘನ್‌ ಆತ್ಮಹತ್ಯಾ ದಾಳಿ: 12ಕ್ಕೂ ಹೆಚ್ಚು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಆಫ್ಘನ್‌ ಆತ್ಮಹತ್ಯಾ ದಾಳಿ: 12ಕ್ಕೂ ಹೆಚ್ಚು ಸಾವು

ಕಾಬೂಲ್‌ (ಏಜೆನ್ಸೀಸ್‌): ಆಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ಸಂಸತ್‌ ಭವನದ ಸಮೀಪ ಬುಧವಾರ ಸಂಜೆ ಆತ್ಮಹತ್ಯಾ ಬಾಂಬ್‌ ದಾಳಿ ನಡೆದಿದೆ.

ಸ್ಫೋಟದಲ್ಲಿ 12ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದಾರೆ ಎಂದು ಆಫ್ಘನ್‌ ಮಾಧ್ಯಮಗಳು ವರದಿ ಮಾಡಿವೆ. ಆದರೆ, ಘಟನೆಯಲ್ಲಿ ಎಷ್ಟು ಮಂದಿ ಮೃತಪಟ್ಟಿದ್ದಾರೆ ಎಂಬುದನ್ನು ಅಧಿಕಾರಿಗಳು ಖಚಿತಪಡಿಸಿಲ್ಲ.

ಕಾಬೂಲ್‌ನಲ್ಲಿರುವ ರಷ್ಯಾ ರಾಯಭಾರ ಕಚೇರಿ ಎದುರು ಸರ್ಕಾರಿ ಬಸ್‌ ಗುರಿಯಾಗಿಸಿಕೊಂಡು ಬಾಂಬ್‌ ದಾಳಿ ನಡೆದಿದೆ. ಬಸ್‌ ಸಮೀಪಿಸುತ್ತಲೇ ಕಾರ್‌ನಲ್ಲಿದ್ದ ಆತ್ಮಹತ್ಯಾ ಬಾಂಬರ್‌ ತನ್ನನ್ನು ಸ್ಫೋಟಿಸಿಕೊಂಡಿದ್ದಾನೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಈವರೆಗೆ ಯಾವ ಭಯೋತ್ಪಾದನಾ ಸಂಘಟನೆಯೂ ದಾಳಿಯ ಹೊಣೆ ಹೊತ್ತಿಲ್ಲ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.