ಭಾನುವಾರ, ಜೂನ್ 20, 2021
28 °C

ಆಫ್ಘನ್ ನಾಗರಿಕರ ಹತ್ಯೆ: ಅಧ್ಯಕ್ಷ ಒಬಾಮ ಕಳವಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್ (ಪಿಟಿಐ): ಅಮೆರಿಕ ಯೋಧರು ಆಪ್ಘಾನಿಸ್ತಾನದ ಕಂದಹಾರ್‌ನಲ್ಲಿ ಮಹಿಳೆಯರು ಮಕ್ಕಳು ಸೇರಿದಂತೆ 16 ಮಂದಿ ನಾಗರಿಕರನ್ನು ಹತ್ಯೆ ಮಾಡಿರುವ ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿ, ಖಂಡಿಸಿರುವ ಅಧ್ಯಕ್ಷ ಬರಾಕ್ ಒಬಾಮಾ, ಇದೊಂದು ಆಘಾತಕಾರಿ ವಿಷಯ ಎಂದು ಬಣ್ಣಿಸಿದ್ದಾರೆ.ಅಮೆರಿಕ ಸೇನೆ ಇಂತಹ ಕೃತ್ಯ ಎಸಗಿದೆ ಎಂದು ನಂಬಲು ಸಾಧ್ಯವಾಗುತ್ತಿಲ್ಲ. ಜತೆಗೆ ಅಮೆರಿಕ ಯೋಧರ ನಡವಳಿಕೆಗೆ ಇದು ವಿರುದ್ಧವಾಗಿದ್ದು, ಘನತೆಗೆ ಕುಂದು ತರುವಂತಾದ್ದಾಗಿದೆ. ಇದರಿಂದ ತಮಗೆ ಅತ್ಯಂತ ದುಃಖವಾಗಿದೆ ಎಂದೂ ಅವರು ಹೇಳಿದ್ದಾರೆ.ಅಮೆರಿಕ ಸೇನಾ ನೆಲೆಯ ಬಳಿ ಯೋಧನೊಬ್ಬ ಭಾನುವಾರ ಗ್ರಾಮಸ್ಥರ ಮೇಲೆ ಗುಂಡು ಹಾರಿಸಿದ್ದು, ಒಂಬತ್ತು ಮಕ್ಕಳು, ಮೂವರು ಮಹಿಳೆಯರು ಸೇರಿದಂತೆ ಒಟ್ಟು 16 ಮಂದಿ ಸತ್ತಿರುವ ಬಗ್ಗೆ ಅಧ್ಯಕ್ಷ ಒಬಾಮಾ ಅವರಿಗೆ ಮಾಹಿತಿ ನೀಡಲಾಗಿದೆ ಎಂದು ಶ್ವೇತಭವನದ ಮೂಲಗಳು ತಿಳಿಸಿವೆ.ಅಮೆರಿಕ ರಕ್ಷಣಾ ಕಾರ್ಯದರ್ಶಿ ಲಿಯೊನ್ ಪೆನೆಟ್ಟಾ ಅವರು ಆಫ್ಘನ್ ಅಧ್ಯಕ್ಷ ಹಮೀದ್ ಕರ್ಜೈ ಅವರನ್ನು ಸಂಪರ್ಕಿಸಿ, ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ.ಘಟನೆಗೆ ಕಾರಣವಾದ ವ್ಯಕ್ತಿಗಳ ವಿರುದ್ಧ ಶೀಘ್ರ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿಯೂ ಅವರು ಕರ್ಜೈ ಅವರಿಗೆ ಭರವಸೆ ನೀಡಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.