ಶುಕ್ರವಾರ, ಮೇ 14, 2021
29 °C

ಆಭರಣ ಅವ್ಯವಹಾರ: ಶಿಸ್ತು ಕ್ರಮಕ್ಕೆ ಆದೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪಾಂಡವಪುರ: ತಾಲ್ಲೂಕಿನ ಮೇಲುಕೋಟೆಯ ಚೆಲುವನಾರಾಯಣಸ್ವಾಮಿ ದೇವಾಲಯದಲ್ಲಿ ನಡೆದಿದೆ ಎನ್ನಲಾದ ಆಭರಣ ಅವ್ಯವಹಾರಕ್ಕೆ ಸಂಬಂಧಿಸಿ ತಪ್ಪಿತಸ್ಥರ ಮೇಲೆ ದೇವಾಲಯದ ವ್ಯವಸ್ಥಾಪನಾ ಸಮಿತಿ ಶಿಸ್ತು ಕ್ರಮ ಜರುಗಿಸಬೇಕು ಎಂದು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತ ನಂದಕುಮಾರ್ ಸೋಮವಾರ ಆದೇಶ ಹೊರಡಿಸಿದ್ದಾರೆ.ಮೇ 28ರಂದು ಮೇಲುಕೋಟೆಯ ಚೆಲುವನಾರಾಯಣಸ್ವಾಮಿ ದೇವಾಲಯದ ವ್ಯವಸ್ಥಾಪನಾ ಸಮಿತಿ ಸಭೆ ಸೇರಿ ಆರೋಪಿ ನರಸರಾಜ ಭಟ್ಟರನ್ನು ದೀರ್ಘ ರಜೆ ಮೇಲೆ ತೆರಳುವಂತೆ ಹೇಳಿ, ಈ ಸ್ಥಾನಕ್ಕೆ ವರದರಾಜ ಭಟ್ಟರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳುವಂತೆ ತೀರ್ಮಾನಿಸಿತ್ತು.ಈ ವಿಚಾರವಾಗಿ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರಿಗೆ ಪತ್ರ ಬರೆದು ದೇವಾಲಯದ ಆಭರಣದ ಅವ್ಯವಹಾರಕ್ಕೆ ಸಂಬಂಧಿಸಿ ಶಿಸ್ತು ಕ್ರಮ ಜರುಗಿಸುವ ಬಗ್ಗೆ ಸ್ಪಷ್ಟ ನಿರ್ದೇಶನ ನೀಡಬೇಕೆಂದು ದೇವಸ್ಥಾನ ಸಮಿತಿ ಕೋರಿತ್ತು. ಸಮಿತಿಯ ಪತ್ರವನ್ನು ಪರಿಶೀಲಿಸಿದ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು, ಅವ್ಯವಹಾರದಲ್ಲಿ ಭಾಗಿಯಾಗಿರುವವರ ಮೇಲೆ ಶಿಸ್ತು ಕ್ರಮ ಜರುಗಿಸಲು ಸಮಿತಿಯೇ ನಿರ್ಧಾರ ತೆಗೆದುಕೊಳ್ಳಬೇಕೆಂದು ಸೂಚಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.