ಶುಕ್ರವಾರ, ಮೇ 20, 2022
26 °C

ಆಮದು ಪ್ರಮಾಣ ಶೇ 8ರಷ್ಟು ಹೆಚ್ಚಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಆಹಾರ ಧಾನ್ಯ ಮತ್ತು ಹಾಲಿನ ಉತ್ಪನ್ನಗಳು ಸೇರಿದಂತೆ ದೇಶದ ಆಮದು ಪ್ರಮಾಣವು ಪ್ರಸಕ್ತ ಹಣಕಾಸು ವರ್ಷದ ಏಪ್ರಿಲ್ - ಡಿಸೆಂಬರ್ ಅವಧಿಯಲ್ಲಿ ಶೇ 8ರಷ್ಟು ಹೆಚ್ಚಳಗೊಂಡಿದೆ. ಕಳೆದ ವರ್ಷದ ರೂ 48,548 ಕೋಟಿಗಳಿಗೆ ಹೋಲಿಸಿದರೆ ಈ 9 ತಿಂಗಳ ಅವಧಿಯಲ್ಲಿ ಆಮದು ಮಾಡಿಕೊಂಡ ಸರಕುಗಳ ಮೊತ್ತವು ರೂ 52,492 ಕೋಟಿಗಳಷ್ಟಿತ್ತು. ಆಹಾರ ಧಾನ್ಯಗಳ ಆಮದು ರೂ227 ಕೋಟಿಗಳಷ್ಟು ಹೆಚ್ಚಳಗೊಂಡಿದೆ ಎಂದು ಅಧಿಕೃತ ಅಂಕಿಅಂಶಗಳು ತಿಳಿಸಿವೆ. ಈ ಆಮದು ಹೆಚ್ಚಳವು ದೇಶಿ ಕೈಗಾರಿಕೆ ಮೇಲೆ ಪರಿಣಾಮ ಬೀರಬಹುದು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.