ಸೋಮವಾರ, ಡಿಸೆಂಬರ್ 16, 2019
17 °C

ಆಮರಣ ಉಪವಾಸ ಸತ್ಯಾಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಆಮರಣ ಉಪವಾಸ ಸತ್ಯಾಗ್ರಹ

ಧಾರವಾಡ: ಅನುದಾನ ಬಿಡುಗಡೆಗೆ ಆಗ್ರಹಿಸಿ ರಾಜ್ಯ ಅನುದಾನ ರಹಿತ ಶಾಲಾ- ಕಾಲೇಜುಗಳ ಶಿಕ್ಷಕರ, ನೌಕರರ ಹಾಗೂ ಆಡಳಿತ ಮಂಡಳಿಗಳ ಸಂಘದ ಸದಸ್ಯರು ಇಲ್ಲಿನ ಸಾರ್ವಜನಿಕ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತರ ಕಚೇರಿ ಎದುರು ಮಂಗಳವಾರ ಆಮರಣ ಉಪವಾಸ ಸತ್ಯಾಗ್ರಹ ಆರಂಭಿಸಿದರು.

 

ಕಳೆದ 40 ದಿನಗಳಿಂದ ಮುಷ್ಕರ ನಡೆಸಿದ್ದರೂ ಸರ್ಕಾರ ಗಮನ ಹರಿಸಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಮಾಜಿ ಸಚಿವ ಬಸವರಾಜ ಹೊರಟ್ಟಿ, ರಾಜಣ್ಣ ಕೊರವಿ, ಎನ್.ಎಚ್.ಕೋನರಡ್ಡಿ, ಸುರೇಶ ಹಿರೇಮಠ, ಆನಂದ ಕುಲಕರ್ಣಿ, ಎಂ.ಆರ್.ಮಲ್ಲನಗೌಡರ ಹಾಗೂ ಜಯ ಕರ್ನಾಟಕ ಸಂಘಟನೆ ಸದಸ್ಯರು ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದರು.ಸರ್ವಮಂಗಳಾ ಕುದರಿ, ರಾಜಶೇಖರ ಮೇಲ್ಮಠ, ಮಲ್ಲಿಕಾರ್ಜುನ ಪಾಟೀಲ, ಕಂಠಪ್ಪ ಹೊಳೆಮ್ಮನವರ, ದಾದಾ ಕಾಟಕರ ಆಮರಣ ಉಪವಾಸ ಸತ್ಯಾಗ್ರಹ ಆರಂಭಿಸಿದರು.

 

ಪ್ರತಿಕ್ರಿಯಿಸಿ (+)