ಮಂಗಳವಾರ, ನವೆಂಬರ್ 19, 2019
22 °C
ಅಂಗನವಾಡಿ ಕಾರ್ಯಕರ್ತೆಯರಿಗೆ ಮತದಾರರ ಜಾಗೃತಿ ಶಿಬಿರ

ಆಮಿಷಕ್ಕೆ ಒಳಗಾಗದಿರಲು ಸಲಹೆ

Published:
Updated:
ಆಮಿಷಕ್ಕೆ ಒಳಗಾಗದಿರಲು ಸಲಹೆ

ಕಾರವಾರ: ಪರಿಣಾಮಕಾರಿ ಪ್ರಜಾಪ್ರಭುತ್ವಕ್ಕೆ ಪ್ರತಿಯೊಬ್ಬರೂ ಮತದಾನ ಮಾಡಬೇಕು ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಸುಬ್ರಾಯ ಕಾಮತ್ ಹೇಳಿದರು.ಅಂಕೋಲಾ ತಾಲ್ಲೂಕು ಪಂಚಾಯ್ತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಅಂಕೋಲಾದಲ್ಲಿ ಅಂಗನವಾಡಿ ಮೇಲ್ವಿಚಾರಕರು ಹಾಗೂ ಕಾರ್ಯಕರ್ತೆಯರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಅಂಗನವಾಡಿ ಕಾರ್ಯಕರ್ತೆಯರು ಜಿಲ್ಲೆಯಾದ್ಯಂತ ಪ್ರತಿ ಮನೆಗಳೊಂದಿಗೆ ಸಂಪರ್ಕ ಹೊಂದಿದ್ದು, ಈ ಸಂಪರ್ಕ ಜಾಲವನ್ನು ಬಳಸಿಕೊಂಡು ಮತದಾರರ ಜಾಗೃತಿ ಮೂಡಿಸಲಾಗುತ್ತಿದೆ. ಸ್ಥಳೀಯವಾಗಿ ಕಾರ್ಯಕ್ರಮವನ್ನು ರೂಪಿಸಿ ಜಾಗೃತಿ ಮೂಡಿಸಬೇಕು ಎಂದು ಅವರು ತಿಳಿಸಿದರು.ಮತದಾರರು ಯಾವುದೇ ಆಮಿಷಕ್ಕೆ ಒಳಗಾಗದೆ ಅರ್ಹ ವ್ಯಕ್ತಿಗಳಿಗೆ ಮಾತ್ರ ಮತ ಚಲಾಯಿಸಬೇಕು ಎಂಬ ಸಂದೇಶವನ್ನು ಸಹ ಪ್ರತಿಯೊಬ್ಬರಿಗೆ ನೀಡಲಾಗುತ್ತಿದೆ. ಚುನಾವಣಾ ಆಯೋಗದ ನಿರ್ದೇಶನದ ಪ್ರಕಾರ ಜಾಗೃತಿ ಕಾರ್ಯಕ್ರಮ ನಡೆಸಬೇಕು. ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಮಿತಿಯನ್ನು ಅರಿತುಕೊಂಡು ಕಾರ್ಯನಿರ್ವಹಿಸಬೇಕು ಎಂದು ಕಾಮತ್ ನುಡಿದರು.ಚುನಾವಣಾ ಆಯೋಗ ಈ ಬಾರಿ ಪ್ರತಿಯೊಬ್ಬ ಸರ್ಕಾರಿ ನೌಕರ ಮತದಾನ ಮಾಡಲು ಕಾರ್ಯಕ್ರಮ ರೂಪಿಸಿದೆ. ಅಂಚೆ ಮತದಾನ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಮೂಲಕ ಎಲ್ಲಾ  ಇಲಾಖೆ ಸಿಬ್ಬಂದಿ ಮತ ಚಲಾಯಿಸಲು ಅವಕಾಶ ಒದಗಿಸಿದೆ. ಇದನ್ನು ಪ್ರತಿಯೊಬ್ಬರು ಬಳಸಿಕೊಳ್ಳಬೇಕು ಎಂದು ಹೇಳಿದರು.ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ತಹಶೀಲ್ದಾರ್ ಲಾಲಂಕಿ ಮಾತನಾಡಿ, ಈ ಬಾರಿ ಮತ ಚಲಾಯಿಸಲು 21 ಗುರುತಿನ ಚೀಟಿಗಳನ್ನು         ಚುನಾವಣಾ ಆಯೋಗ   ನಿಗದಿಪಡಿಸಿದೆ. ಮತದಾನಕ್ಕಿಂತ ಪೂರ್ವದಲ್ಲಿ ಪ್ರತಿಯೊಬ್ಬ ಮತದಾರರಿಗೆ ಭಾವಚಿತ್ರ ಇರುವ ಮತದಾರರ ಚೀಟಿಯನ್ನು ಅವರ ಮನೆಗಳಿಗೆ ಒದಗಿಸಲಾಗುವುದು.

ಮತಗಟ್ಟೆ ಅಧಿಕಾರಿಗಳು ಇಂತಹ ಮತದಾರರ ಚೀಟಿಯನ್ನು ಪ್ರತಿಯೊಬ್ಬರಿಗೆ ನೀಡಿ ಸ್ವೀಕೃತಿಯನ್ನು ಪಡೆದು ವಹಿ ಯಲ್ಲಿ ನಿರ್ವಹಿಸಬೇಕು ಎಂದು ತಿಳಿಸಿ ದರು.ತಾಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಪಿ.ಜಿ.ಗಾಂವ್ಕರ್, ಜಿಲ್ಲಾ ವಾರ್ತಾಧಿಕಾರಿ ಶಫಿ ಸಾದುದ್ದೀನ್ ಉಪಸ್ಥಿತರಿದ್ದರು.

ಪ್ರತಿಕ್ರಿಯಿಸಿ (+)