ಮಂಗಳವಾರ, ನವೆಂಬರ್ 12, 2019
28 °C

`ಆಮಿಷಕ್ಕೆ ಬಲಿಯಾಗಿ ಮತ ಚಲಾವಣೆ: ಪ್ರಜಾಪ್ರಭುತ್ವಕ್ಕೆ ಅಪಚಾರ'

Published:
Updated:

ಬೆಂಗಳೂರು: ಕರ್ನಾಟಕ ಜನಾಂದೋಲನಾ ಸಂಘಟನೆಯ ವತಿಯಿಂದ ನಗರದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ `ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಜಕೀಯ ಪಕ್ಷಗಳು, ಮುಖಂಡರು ಮತ್ತು ಜನರ ಸಮಸ್ಯೆಗಳು ಹಾಗೂ ನಮ್ಮೆಲ್ಲರ ಮುಂದಿರುವ ಸವಾಲುಗಳು' ವಿಷಯ ಕುರಿತ ವಿಚಾರ ಸಂಕಿರಣವನ್ನು ವಕೀಲ ಎ.ಕೆ.ಸುಬ್ಬಯ್ಯ ಅವರು ಉದ್ಘಾಟಿಸಿದರು.ನಂತರ ಮಾತನಾಡಿದ ಅವರು, ಪ್ರಸ್ತುತ ಸಂದರ್ಭದಲ್ಲಿ ಚುನಾವಣೆ ಎಂದರೆ ಹಣದ ಬಲದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ವಿಧಾನ ಎಂಬಂತಾಗಿದೆ. ರಾಜಕಾರಣಿಗಳ ಆಮಿಷಕ್ಕೆ ಬಲಿಯಾಗಿ ಮತ ಚಲಾಯಿಸಿದರೆ ಪ್ರಜಾಪ್ರಭುತ್ವಕ್ಕೆ ಅಪಚಾರ ಎಸಗಿದಂತಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು. ಸಂಘಟನೆಯ ಸಂಘಟನಾ ಕಾರ್ಯದರ್ಶಿಯಾದ ಎಂ.ಶ್ರೀನಿವಾಸ್ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಪ್ರತಿಕ್ರಿಯಿಸಿ (+)