ಶುಕ್ರವಾರ, ಜೂನ್ 18, 2021
23 °C

ಆಮೆಗತಿಯಲ್ಲಿ ವಾಜಪೇಯಿ ವಸತಿಗೃಹ ನಿರ್ಮಾಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜಗಳೂರು: ತಾಲ್ಲೂಕಿನ ಗುರುಸಿದ್ದಾಪುರ ಅರಣ್ಯ ಪ್ರದೇಶದಲ್ಲಿ ಗೋಶಾಲೆ ಪ್ರಾರಂಭಕ್ಕೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಎಸ್. ಪಟ್ಟಣಶೆಟ್ಟಿ ಅಧಿಕಾರಿಗಳಿಗೆ ಸೂಚನೆ ನೀಡಿದರು.ತಾಲ್ಲೂಕಿನ ಮಡ್ರಳ್ಳಿ ಚೌಡೇಶ್ವರಿ ದೇವಸ್ಥಾನದ ಸಮೀಪ ಗುರುವಾರ ಗೋಶಾಲೆ ನಿರ್ಮಾಣದ ಸಿದ್ಧತಾ ಕಾರ್ಯ ಅವರು ಪರಿಶೀಲಿಸಿದರು.ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸುವ ಜಾನುವಾರುಗಳಿಗೆ ಅಗತ್ಯ ಮೇವು, ಕುಡಿಯುವ ನೀರು ಹಾಗೂ ಶೆಡ್‌ಗಳನ್ನು ನಿರ್ಮಿಸಲು ಹಾಗೂ ಜಾನುವಾರುಗಳ  ಆರೋಗ್ಯದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಅಗತ್ಯ ಔಷಧಿ ಮತ್ತು ವೈದ್ಯರ ನಿಯೋಜನೆ ಮಾಡುವಂತೆ ಪಶುಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಡಾ.ಕೇಶವಮೂರ್ತಿ ಅವರಿಗೆ ಸೂಚಿಸಿದರು.ತಾಲ್ಲೂಕಿನ ಮೆದಗಿನಕೆರೆ ಮತ್ತು ಅಣಬೂರು ಸಮೀಪ ಹಸಿರು ಮೇವು ಬೆಳೆಸಲು ಕ್ರಮ ಕೈಗೊಳ್ಳಬೇಕು. ಗೋಶಾಲೆಗಳಲ್ಲಿ ತುರ್ತು ಮೇವಿನ ಅಗತ್ಯವಿದ್ದು, ಚನ್ನಗಿರಿ ತಾಲ್ಲೂಕಿನಿಂದ ಎರಡು ಲೋಡ್ ಮೇವು ತರಿಸಿಕೊಳ್ಳಲು ಡಿಸಿ ಸಲಹೆ ನೀಡಿದರು. ಪಲ್ಲಾಗಟ್ಟೆ ಹಾಗೂ ಮರಿಕುಂಟೆ ಗ್ರಾಮಗಳಿಗೆ ಜಿಲ್ಲಾಧಿಕಾರಿ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಗ್ರಾಮದಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆಯಾಗಿದ್ದು, ನೀರು ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು.

 

`ಬರಪರಿಹಾರ ಯೋಜನೆಯಡಿ ಜಗಳೂರು ವಿಧಾನಸಭಾ ಕ್ಷೇತ್ರಕ್ಕೆ ್ಙ 1 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ತಾಲ್ಲೂಕಿಗೆ ್ಙ 70 ಲಕ್ಷ ಮತ್ತು ಕ್ಷೇತ್ರ ವ್ಯಾಪ್ತಿಯ ಅರಸಿಕೆರೆ ಹೋಬಳಿಗೆ ್ಙ 30 ಲಕ್ಷ ಅನುದಾನದಲ್ಲಿ ತುರ್ತು ಪರಿಹಾರ ಕಾಮಗಾರಿಗಳನ್ನು ನಿರ್ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು  ಪಟ್ಟಣಶೆಟ್ಟಿ ಸ್ಪಷ್ಟಪಡಿಸಿದರು.ಉಪ ವಿಭಾಗಾಧಿಕಾರಿ ಮಲ್ಲಪ್ಪ, ತಹಶೀಲ್ದಾರ್ ಎಚ್.ಪಿ. ನಾಗರಾಜ್, ಪಿಆರ್‌ಇಡಿ ಎಇಇ ಎನ್. ಲಿಂಗರಾಜ್ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.