ಬುಧವಾರ, ಮೇ 18, 2022
24 °C

ಆಯುಕ್ತರನ್ನು ಮುಂದುವರಿಸಲು ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ಅಂಗವಿಕಲರ ರಾಜ್ಯ ಆಯುಕ್ತರ ಹುದ್ದೆಯು ಅನುಭವಾತ್ಮಕ ಹಾಗೂ ಜವಾಬ್ದಾರಿ ಹೆಚ್ಚಾಗಿರುವುದರಿಂದ ಈಗಿರುವ ಆಯುಕ್ತರನ್ನೇ ಮುಂದುವರೆಸಬೇಕು' ಎಂದು ರಾಷ್ಟ್ರೀಯ ಅಂಗವಿಕಲಂಗ್ ಮಂಚ್‌ನ ರಾಜ್ಯ ಘಟಕದ ಅಧ್ಯಕ್ಷ ಕೆ.ಎನ್.ಸುಧೀಂದ್ರ ಕುಮಾರ್ ಮನವಿ ಮಾಡಿದರು.ಸೋಮವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೂತನ ಆಯುಕ್ತರನ್ನು ನೇಮಿಸಿದರೆ ಅಂಗವಿಕಲರ ಸಮಸ್ಯೆ ಅರ್ಥಮಾಡಿಕೊಳ್ಳಲು ಸಮಯ ಬೇಕಾಗುತ್ತದೆ. ಆದ್ದರಿಂದ ಈಗಿನ ಆಯುಕ್ತ ಕೆ.ವಿ.ರಾಜಣ್ಣ ಅವರನ್ನೇ ಮತ್ತೊಂದು ಅವಧಿಗೆ ಮುಂದುವರೆಸಬೇಕು ಎಂದು ಒತ್ತಾಯಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.