ಬುಧವಾರ, ಜೂನ್ 3, 2020
27 °C

ಆಯುರ್ವೇದ ಆಸ್ಪತ್ರೆ ಕಟ್ಟಡಕೆ ಭೂಮಿಪೂಜೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಆಯುರ್ವೇದ ಆಸ್ಪತ್ರೆ ಕಟ್ಟಡಕೆ ಭೂಮಿಪೂಜೆ

ವಿರಾಜಪೇಟೆ: ಆಯುರ್ವೇದ ಆಸ್ಪತ್ರೆ ನಿರ್ಮಾಣದಿಂದ ತಾಲ್ಲೂಕಿನ ರೋಗಿಗಳಿಗೆ ಅನುಕೂಲವಾಗಲಿದೆ ಎಂದು ವಿಧಾನಸಭಾ ಅಧ್ಯಕ್ಷ ಕೆ.ಜಿ.ಬೋಪಯ್ಯ ಹೇಳಿದರು.ಕೊಡಗು ಜಿಲ್ಲಾ ಆಯುಷ್ ಇಲಾಖೆ ವತಿಯಿಂದ ಇಲ್ಲಿನ ಸಾರ್ವಜನಿಕ ಆಸ್ಪತ್ರೆಯ ಪಕ್ಕದಲ್ಲಿ ವಿರಾಜಪೇಟೆ ಸರ್ಕಾರಿ ಆಯುಷ್ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿಗೆ ಬುಧವಾರ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.ಆಯುಷ್ ಇಲಾಖೆಯ ಜಿಲ್ಲಾ ವೈದ್ಯಾಧಿಕಾರಿ ತಿಮ್ಮಪ್ಪ ಶೆಟ್ಟ ಮಾತನಾಡಿ ಸುಮಾರು ರೂ. 83ಲಕ್ಷ ವೆಚ್ಚದಲ್ಲಿ ಸುಸಜ್ಜಿತ ಆಯುರ್ವೇದಿಕ್ ಆಸ್ಪತ್ರೆ ನಿರ್ಮಿಸಲಾಗುತ್ತಿದೆ. ಕಟ್ಟಡ ಕಾಮಗಾರಿಗೆ ರೂ 55ಲಕ್ಷ,  ಉಳಿದ ಹಣವನ್ನು ಕ್ರಿಯಾ ಯೋಜನೆಯಂತೆ ಉಪಕರಣಗಳು ಹಾಗೂ ಔಷಧ ಖರೀದಿಗೆ ವ್ಯಯಿಸಲಾಗುವುದು ಎಂದರು.ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಎಚ್.ಎಂ.ಕಾವೇರಿ, ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಕೆ.ಕಾಂತಿ ಬೆಳ್ಳಿಯಪ್ಪ, ಸದಸ್ಯೆ ಮಣಿನಂಜಪ್ಪ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ದಿನೇಶ್, ಆರ್.ಎಂ.ಸಿ. ಅಧ್ಯಕ್ಷ ರಘುನಾಣಯ್ಯ ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಮುರುಳೀಧರ್, ಪಟ್ಟಣ ಪಂಚಾಯಿತಿ ಅಧ್ಯಕ್ಷ ವಿ.ಕೆ,ಸತೀಶ್‌ಕುಮಾರ್ ಇತರರು ಇದ್ದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.