ಬುಧವಾರ, ಮೇ 18, 2022
27 °C

ಆಯೋಗಕ್ಕೆ ಅನರ್ಹ ಶಾಸಕರ ಮೊರೆ.ಉಪ ಚುನಾವಣೆ ಬೇಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಪಕ್ಷಾಂತರ ನಿಷೇಧ ಕಾಯ್ದೆಯಡಿ ಅನರ್ಹಗೊಂಡಿರುವ 11 ಬಿಜೆಪಿ ಹಾಗೂ ಐವರು ಪಕ್ಷೇತರ ಶಾಸಕರು ತಾವು ಪ್ರತಿನಿಧಿಸಿರುವ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ ಮಾಡಬಾರದು ಎಂದು ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ.ಶಾಸಕರ ಅನರ್ಹತೆ ಪ್ರಶ್ನೆ ಸುಪ್ರೀಂ ಕೋರ್ಟ್ ಮುಂದಿದ್ದು, ತೀರ್ಪು ಪ್ರಕಟವಾಗುವವರೆಗೆ ಉಪ ಚುನಾವಣೆ ಘೋಷಣೆ ಮಾಡಬಾರದು ಎಂದು ಅನರ್ಹ ಶಾಸಕರ ಪರ ವಕೀಲ ಪ್ರಶಾಂತ್ ಗುರುವಾರ ಆಯೋಗಕ್ಕೆ ಮನವಿ ಸಲ್ಲಿಸಿದ್ದಾರೆ.11 ಬಿಜೆಪಿ ಶಾಸಕರ ಅನರ್ಹ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದೆ. ಉಳಿದ ಐವರು ಪಕ್ಷೇತರ ಶಾಸಕರ ಅನರ್ಹತೆ ಪ್ರಶ್ನೆ ವಿಚಾರಣೆ ಹಂತದಲ್ಲಿದೆ ಎಂದು ಮನವಿಯಲ್ಲಿ ವಿವರಿಸಲಾಗಿದೆ. ಶಾಸಕರ ಅನರ್ಹತೆ ಪರಿಣಾಮವಾಗಿ ತೆರವಾಗಿರುವ ಸ್ಥಾನಗಳಿಗೆ ಚುನಾವಣಾ ಆಯೋಗ ಏಪ್ರಿಲ್ 10ರ ಒಳಗೆ ಚುನಾವಣೆ ನಡೆಸುವ ಸಾಧ್ಯತೆ ಇದೆ. ಈ ಬಗ್ಗೆ ಆಯೋಗ ಸುಳಿವು ಕೂಡಾ ನೀಡಿದೆ.ಯಡಿಯೂರಪ್ಪ ನೇತೃತ್ವದ ಸರ್ಕಾರದ ಮೇಲೆ ತಮಗೆ ವಿಶ್ವಾಸ ಇಲ್ಲ ಎಂಬ ಪತ್ರವನ್ನು ರಾಜ್ಯಪಾಲರಿಗೆ 16 ಶಾಸಕರು ಕೊಟ್ಟ ಹಿನ್ನೆಲೆಯಲ್ಲಿ ಸ್ಪೀಕರ್ ಇವರನ್ನು ಅನರ್ಹಗೊಳಿಸಿದ್ದಾರೆ.ಇದರಿಂದ ಬಿಜೆಪಿ ಸರ್ಕಾರ ವಿಶ್ವಾಸ ಮತ ಯಾಚನೆ ವೇಳೆ ಇವರು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಲಿಲ್ಲ.ವಿಧಾನಸಭೆ ಸ್ಪೀಕರ್ ಕ್ರಮವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಇದನ್ನು ಅನರ್ಹ ಶಾಸಕರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.