ಪಳ್ಳೆಕೆಲೆ, ಶ್ರೀಲಂಕಾ (ಪಿಟಿಐ): ಆರಂಭಿಕ ಬ್ಯಾಟ್ಸ್ಮನ್ಗಳು ಶೀಘ್ರದಲ್ಲಿ ಫಾರ್ಮ್ ಕಂಡುಕೊಳ್ಳುವುದು ಅಗತ್ಯ ತಂದು ಪಾಕ್ ತಂಡದ ಕೋಚ್ ವಕಾರ್ ಯೂನಿಸ್ ಹೇಳಿದ್ದಾರೆ.

ಮೊಹಮ್ಮದ್ ಹಫೀಜ್ ಮತ್ತು ಅಹ್ಮದ್ ಶೆಹಜಾದ್ ಅವರು ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಮೊದಲ ಮೂರು ಪಂದ್ಯಗಳಲ್ಲಿ ಪಾಕ್ ತಂಡಕ್ಕೆ ಉತ್ತಮ ಆರಂಭ ನೀಡಲು ವಿಫಲರಾಗಿದ್ದರು. ಈ ಕಾರಣ ಯೂನಿಸ್ ಇಬ್ಬರಿಗೂ ಎಚ್ಚರಿಕೆಯ ಸಂದೇಶ ನೀಡಿದ್ದಾರೆ,

‘ಬ್ಯಾಟಿಂಗ್ನಲ್ಲಿ ಸುಧಾರಣೆ ಉಂಟಾಗಿರುವುದನ್ನು ನಾವು ತೋರಿಸಬೇಕು. ಅದರಲ್ಲೂ ಮುಖ್ಯವಾಗಿ ಆರಂಭಿಕ ಬ್ಯಾಟ್ಸ್ಮನ್ಗಳು ಇದುವರೆಗೆ ಉತ್ತಮ ಪ್ರದರ್ಶನ ನೀಡಿಲ್ಲ’ ಎಂದು ವಕಾರ್ ಶನಿವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

‘ತಂಡಕ್ಕೆ ಸ್ಫೋಟಕ ಆರಂಭ ನೀಡಲು ಸಾಧ್ಯವಾಗಿಲ್ಲ ಎಂಬುದು ಇಬ್ಬರು ಆರಂಭಿಕ ಬ್ಯಾಟ್ಸ್ಮನ್ಗಳಿಗೂ ತಿಳಿದಿದೆ. ಆದರೆ ನನಗೆ ಹೆಚ್ಚಿನ ಆತಂಕ ಇಲ್ಲ. ಏಕೆಂದರೆ ಇಬ್ಬರು ಬ್ಯಾಟ್ಸ್ಮನ್ಗಳ ತಂತ್ರಗಾರಿಕೆಯಲ್ಲಿ ಯಾವುದೇ ಲೋಪವಿಲ್ಲ. ಅತ್ಯುತ್ತಮ ಫಾರ್ಮ್ನೊಂದಿಗೆ ಇಬ್ಬರೂ ವಿಶ್ವಕಪ್ಗೆ ಆಗಮಿಸಿದ್ದರು. ಸದ್ಯದಲ್ಲೇ ಅವರು ಲಯ ಕಂಡುಕೊಳ್ಳುವ ವಿಶ್ವಾಸ ನನ್ನದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.