ಆರನೇ ವೇತನ ಆಯೋಗ ಶಿಫಾರಸು ಜಾರಿಗೆ ಆಗ್ರಹ

7

ಆರನೇ ವೇತನ ಆಯೋಗ ಶಿಫಾರಸು ಜಾರಿಗೆ ಆಗ್ರಹ

Published:
Updated:

ಹೊನ್ನಾಳಿ: ಬೆಲೆಯೇರಿಕೆಯ ಇಂದಿನ ದಿನಗಳಲ್ಲಿ ಸರ್ಕಾರಿ ನೌಕರರು ಜೀವನ ನಡೆಸುವುದೇ ದುಸ್ತರವಾಗಿದೆ, ಸರ್ಕಾರ ಶೀಘ್ರವೇ 6ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕು ಎಂದು ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ನ್ಯಾಮತಿ ನಾಗರಾಜ್ ಒತ್ತಾಯಿಸಿದರು.ಇಲ್ಲಿನ ಮಿನಿ ವಿಧಾನಸೌಧದ ಬಳಿ ಬುಧವಾರ ನೌಕರರ ಬಹಿರಂಗ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿ, ಸರ್ಕಾರ ್ಙ 350ನ್ನು ಮನೆ ಬಾಡಿಗೆ ಭತ್ಯೆಯಾಗಿ ನೀಡುತ್ತಿದೆ, ಇದು ಯಾವುದಕ್ಕೂ ಸಾಲದು ಎಂದರು.



ಜೀವನಾವಶ್ಯಕ ವಸ್ತುಗಳ ಬೆಲೆಯೇರಿಕೆಯಿಂದಾಗಿ ಇಂದು ‘ಡಿ’ ದರ್ಜೆ ನೌಕರರು ಜೀವನ ನಡೆಸುವುದೇ ದುಸ್ತರವಾಗಿದೆ, ಸರ್ಕಾರ ತಕ್ಷಣ ನೌಕರರಿಗೆ ಸ್ಪಂದಿಸಬೇಕು ಎಂದು ಮನವಿ ಮಾಡಿದರು.2006ರ ನಂತರ ನೇಮಕಗೊಂಡ ನೌಕರರಿಗೆ ಜಾರಿಗೊಳಿಸಿರುವ ಹೊಸ ಪಿಂಚಣಿ ವ್ಯವಸ್ಥೆ ರದ್ದುಪಡಿಸಿ, ಹಳೇ ಪಿಂಚಣಿ ವ್ಯವಸ್ಥೆಯನ್ನು ಜಾರಿಗೊಳಿಸಬೇಕು ಎಂದು ಅವರು ಒತ್ತಾಯಿಸಿದರು.  



ಸಂಘದ ಮಾಜಿ ಅಧ್ಯಕ್ಷ ಗಾಳಿ ನಾಗರಾಜ್ ಮಾತನಾಡಿ, ಮುಖ್ಯಮಂತ್ರಿ ಅವರು ಇದೇ ಆಯವ್ಯಯದಲ್ಲಿ 6ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.ಜಗದೀಶ್, ಎಂ.ಪಿ.ಎಂ. ಷಣ್ಮುಖಯ್ಯ ಇತರರು ನೌಕರರ ಸಮಸ್ಯೆಗಳ ಕುರಿತು ಮಾತನಾಡಿದರು.ಸಂಘದ ಅಧ್ಯಕ್ಷ ಕೆ. ಜೀನಹಳ್ಳಿ, ಸಿ.ಆರ್. ಚಂದ್ರಶೇಖರ್, ಪಿ.ಎಂ. ಸಿದ್ದಯ್ಯ ಇತರರು ಉಪಸ್ಥಿತರಿದ್ದರು. ನೂರಾರು ನೌಕರರು ಬಹಿರಂಗ ಸಭೆಯಲ್ಲಿ ಪಾಲ್ಗೊಂಡಿದ್ದರು. 



  ಅರ್ಜಿ ಆಹ್ವಾನ

ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ ಕಿತ್ತೂರು ರಾಣಿ ಚನ್ನಮ್ಮ ವಸತಿಶಾಲೆ ಹಾಗೂ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿಶಾಲೆಗೆ 2011-12ನೇ ಸಾಲಿಗೆ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.



ಫೆ. 7ರಿಂದ 26ರವರೆಗೆ ಅರ್ಜಿ ನೀಡಲಾಗುವುದು. ಅರ್ಜಿ ಸಲ್ಲಿಸಲು ಫೆ. 26 ಕಡೆಯ ದಿನ. ಮಾಚ್ 27ರಂದು ತಾಲ್ಲೂಕು ಕೇಂದ್ರದಲ್ಲಿ ಬೆಳಿಗ್ಗೆ 11ರಿಂದ ಮಧ್ಯಾಹ್ನ 1.30ರವರೆಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುವುದು.ವಿವರಗಳಿಗೆ ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿಯನ್ನು ಸಂಪರ್ಕಿಸಬಹುದು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry