ಘಾಜಿಯಾಬಾದ್ (ಪಿಟಿಐ): ಆರುಷಿ - ಹೇಮರಾಜ್ ಕೊಲೆ ಪ್ರಕರಣದ ಆರೋಪ ಎದುರಿಸುತ್ತಿರುವ ದಂತ ವೈದ್ಯೆ ನೂಪರ್ ತಲ್ವಾರ್ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಸಿಬಿಐ ವಿಶೇಷ ನ್ಯಾಯಾಲಯ ಬುಧವಾರ ಅವರ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.

ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಪ್ರೀತಿ ಸಿಂಗ್ ಇದೇ ತಿಂಗಳ 18ನೇ ತಾರೀಖಿಗೆ ಪ್ರಕರಣದ ಮುಂದಿನ ವಿಚಾರಣೆಯನ್ನು ಮುಂದೂಡಿದ್ದಾರೆ.

ರಾಜೇಶ್ ತಲ್ವಾರ್ ಅವರು, ಪತ್ನಿ ನೂಪುರ್ ಅವರಿಗೆ ನ್ಯಾಯಾಲಯಕ್ಕೆ ಹಾಜರಾಗಲು ಕಾಲಾವಕಾಶ ಕೋರಿದ್ದರು. ಆದರೆ ಸಿಬಿಐ ಇದನ್ನು ತಿರಸ್ಕರಿಸಿ, ಅವರ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು.

ನೂಪುರ್ ತಲ್ವಾರ್ ಅವರನ್ನು ಬಂಧಿಸಿ, ಮುಂದಿನ ವಿಚಾರಣೆ ದಿನಾಂಕದಂದು ಕೋರ್ಟ್ಗೆ ಹಾಜರು ಪಡಿಸುವಂತೆ ನ್ಯಾಯಾಲಯ ನೊಯಿಡಾ ಪೊಲೀಸರಿಗೆ ಸೂಚನೆ ನೀಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.