ಭಾನುವಾರ, ಏಪ್ರಿಲ್ 11, 2021
22 °C

ಆರುಷಿ ಪ್ರಕರಣ: ವಿಚಾರಣೆಗೆ ತಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಆರುಷಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಂದೆ ರಾಜೇಶ್ ತಲ್ವಾರ್ ಮತ್ತು ತಾಯಿ ನೂಪುರ್ ತಲ್ವಾರ್ ಅವರ ವಿರುದ್ಧ ಕೆಳಹಂತದ ನ್ಯಾಯಾಲಯದಲ್ಲಿ ನಡೆಯುತ್ತಿರುವ ಎಲ್ಲ ವಿಚಾರಣೆಗಳಿಗೂ ಸುಪ್ರೀಂಕೋರ್ಟ್ ಶನಿವಾರ ತಡೆಯಾಜ್ಞೆ ನೀಡಿದೆ.ಆದರೆ ದಂಪತಿ ವಿಚಾರಣಾ ನ್ಯಾಯಾಲಯದಲ್ಲಿ ಹಾಜರಾಗಿ ಪಾಸ್‌ಪೋರ್ಟ್ ಅನ್ನು ಒಪ್ಪಿಸಬೇಕು ಎಂದು ನ್ಯಾಯಮೂರ್ತಿ ಬಿ.ಸುದರ್ಶನ ರೆಡ್ಡಿ ಮತ್ತು ಎಸ್.ಎಸ್.ನಿಜ್ಜರ್ ಅವರನ್ನು ಒಳಗೊಂಡ ಪೀಠ ಷರತ್ತು ವಿಧಿಸಿದೆ.2008ರಲ್ಲಿ ನಡೆದ ಆರುಷಿ  ಹಾಗೂ ಮನೆ ಕೆಲಸಗಾರ ಹೇಮರಾಜ್ ಅವರ ಹತ್ಯೆಗೆ ಸಂಬಂಧಿಸಿದಂತೆ ಹೆತ್ತವರಾದ ತಲ್ವಾರ್ ವೈದ್ಯ ದಂಪತಿಯ ಸುತ್ತ ಅನುಮಾನ ದಟ್ಟವಾಗಿರುವ ಹಿನ್ನೆಲೆಯಲ್ಲಿ, ಸಿಬಿಐ ಪ್ರಕರಣ ದಾಖಲು ಮಾಡಿತ್ತು. ವಿಶೇಷ ನ್ಯಾಯಾಲಯ ದಂಪತಿಯ ಹಾಜರಿಗೆ ವಾರೆಂಟ್ ಹೊರಡಿಸಿತ್ತು.ಈ ಮುನ್ನ ತಮ್ಮ ವಿರುದ್ಧ ಕ್ರಮ ಜರುಗಿಸದಂತೆ ತಡೆಯಲು ಕೋರಿ ಅಲಹಾಬಾದ್ ಹೈಕೋರ್ಟ್‌ಗೆ ದಂಪತಿ ಅರ್ಜಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್ ಈ ಅರ್ಜಿಯನ್ನು ತಿರಸ್ಕರಿಸಿದ ಕಾರಣ ಅವರು ಸುಪ್ರೀಂಕೋರ್ಟ್‌ಗೆ ಮೊರೆಹೋಗಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.