ಬುಧವಾರ, ಜನವರಿ 29, 2020
27 °C

ಆರು ಲಕ್ಷ ಕೋಟಿ ಬಂಡವಾಳ, 10 ಲಕ್ಷ ಉದ್ಯೋಗದ ನಿರೀಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾವೇರಿ:`ಬರುವ ಮಾರ್ಚನಲ್ಲಿ ಎರಡನೇ ವಿಶ್ವ ಬಂಡವಾಳ ಹೂಡಿಕೆ ದಾರರ ಸಮಾವೇಶವನ್ನು ಆಯೋಜಿಸ ಲಾಗಿದ್ದು, ಈ ಸಮಾವೇಶದಲ್ಲಿ ಕನಿಷ್ಠ 6 ಲಕ್ಷ ಕೋಟಿ ರೂ. ಬಂಡವಾಳ ರಾಜ್ಯಕ್ಕೆ ಹರಿದು ಬರುವ ನಿರೀಕ್ಷೆ ಯಿದೆ~ ಎಂದು ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ತಿಳಿಸಿದರು.ತಾಲ್ಲೂಕಿನ ದೇವಗಿರಿ ಗ್ರಾಮದಲ್ಲಿನ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಕಟ್ಟಡದ ಎರಡನೇ ಹಂತದ ಕಾಮ ಗಾರಿ ಶಂಕುಸ್ಥಾಪನೆ ಹಾಗೂ ನೂತನವಾಗಿ ನಿರ್ಮಿಸಲಾದ ನೌಕರರ ವಸತಿಗೃಹದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.ಎರಡನೇ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕಾಗಿ ಬೆಂಗಳೂರಿನಲ್ಲಿ ತಯಾರಿ ಆರಂಭಿಸ ಲಾಗಿದ್ದು, ಕಳೆದ ಬಾರಿ ನಡೆದ ಸಮಾವೇಶದಲ್ಲಿ ಐದು ಲಕ್ಷ ಕೋಟಿ ಬಂಡವಾಳ ರಾಜ್ಯಕ್ಕೆ ಬಂದಿತ್ತು. ಆದರೆ, ಈ ಸಲದ ಸಮಾವೇಶದಲ್ಲಿ ಹಿಂದಿನ ಸಮಾವೇಶಕ್ಕಿಂತ ಒಂದು ಲಕ್ಷ ಕೋಟಿ ರೂ. ಹೆಚ್ಚಿನ ಬಂಡವಾಳ ನಿರೀಕ್ಷಿಸಲಾಗಿದೆ ಎಂದರು.ಕಳೆದ ಬಾರಿ ಬಂಡವಾಳ ಹೂಡಿಕೆ ದಾರರ ಸಮಾವೇಶದ ಯಶಸ್ಸಿನಿಂದ ಉತ್ತೇಜನಗೊಂಡಿರುವ ಉದ್ಯಮಿ ಗಳು ಈ ಬಾರಿಯ ಸಮಾವೇಶದಲ್ಲಿ ಇನ್ನೂ ಹೆಚ್ಚಿನ ಸಂಖ್ಯೆ ಯಲ್ಲಿ ಭಾಗವ ಹಿಸಲಿದ್ದಾರೆ. ಈ ಸಮಾವೇಶದಿಂದ ರಾಜ್ಯದಲ್ಲಿ 10 ಲಕ್ಷ ಜನರಿಗೆ ಉದ್ಯೋಗ ದೊರೆಯಲಿದೆ ಎಂದು ತಿಳಿಸಿದರು.ಆರ್ಥಿಕ ತಜ್ಞ ಡಿ.ಎಂ. ನಂಜುಂಡಪ್ಪ ವರದಿ ಅನ್ವಯ ಹಿಂದುಳಿದ 144 ತಾಲ್ಲೂಕುಗಳ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಒತ್ತು ನೀಡಿದೆಯಲ್ಲದೇ, ಈವರೆಗೆ 12 ಸಾವಿರ ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ಇದರಲ್ಲಿ 10 ಸಾವಿರ ಕೋಟಿ ರೂ.ಖರ್ಚಾಗಿದೆ ಎಂದು ತಿಳಿಸಿದರು.ಕೃಷಿ, ಶಿಕ್ಷಣ, ಗ್ರಾಮೀಣಾಭಿವೃದ್ಧಿಗೆ ರಾಜ್ಯ ಬಿಜೆಪಿ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ. ಈ ನಿಟ್ಟಿನಲ್ಲಿ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸಿದೆ ಎಂದ ಅವರು, ಕಳೆದ ಬಜೆಟ್‌ನಲ್ಲಿ ಶೈಕ್ಷಣಿಕ ಕ್ಷೇತ್ರವೊಂದಕ್ಕೆ 12,280 ಕೋಟಿ ರೂ. ಮೀಸಲಿಟ್ಟಿದೆ ಎಂದು ಹೇಳಿದರು.ಹಾವೇರಿ ಜಿಲ್ಲೆಗೆ ವೈದ್ಯಕೀಯ ಕಾಲೇಜ್ ನೀಡಬೇಕೆಂಬ ಬೇಡಿಕೆ ಬಗ್ಗೆ ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು, ಬರುವ ಬಜೆಟ್‌ನಲ್ಲಿ ಈ ಬಗ್ಗೆ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ. ಹೊಸ ವೈದ್ಯಕೀಯ ಕಾಲೇಜು ಸ್ಥಾಪಿಸುವ ಸಂದರ್ಭದಲ್ಲಿ  ಜಿಲ್ಲೆಗೆ ಮೊದಲ ಆದ್ಯತೆಯನ್ನು ನೀಡಲಾಗುವುದು ಎಂದು ತಿಳಿಸಿದರು. ಜಲಸಂಪ ನ್ಮೂಲ ಸಚಿವ ಬಸವ ರಾಜ ಬೊಮ್ಮಾಯಿ, ಜಿಲ್ಲಾ ಉಸ್ತು ವಾರಿ ಸಚಿವ ಸಿ.ಎಂ.ಉದಾಸಿ, ವಿಧಾನ ಪರಿ ಷತ್ ಸದಸ್ಯ ಶಿವರಾಜ ಸಜ್ಜನರ ಮಾತನಾಡಿ ದರು. ಶಾಸಕ ಸುರೇಶ ಗೌಡ್ರ ಪಾಟೀಲ ಅಧ್ಯಕ್ಷತೆ ವಹಿಸಿದ್ದರು.ಶಾಸಕರಾದ ನೆಹರೂ ಓಲೇಕಾರ್, ಜಿ. ಶಿವಣ್ಣ, ಕುರಿ ಮತ್ತು ಉಣ್ಣೆ ನಿಗಮದ ಅಧ್ಯಕ್ಷ ಭೋಜರಾಜ ಕರೂದಿ, ಕಾಡಾ ಅಧ್ಯಕ್ಷ ಸೋಮಣ್ಣ ಬೇವಿನಮರದ, ಜಿ.ಪಂ. ಅಧ್ಯಕ್ಷ ಮಂಜುನಾಥ ಓಲೇಕಾರ್, ಮಾಜಿ ಶಾಸಕ ಯು.ಬಿ.ಬಣಕಾರ, ಉಪಾಧ್ಯಕ್ಷೆ ಗದಿಗೆವ್ವ ಬಸನಗೌಡರ,  ನಗರಸಭೆ ಅಧ್ಯಕ್ಷ ಜಗದೀಶ ಮಲಗೋಡ, ತಾ.ಪಂ. ಅಧ್ಯಕ್ಷ ಪರಮೇಶಪ್ಪ ಕುರುವತ್ತಿಗೌಡ, ಪ್ರಾಚಾರ್ಯ ಪ್ರಕಾಶ್ ಹಾಜರಿದ್ದರು.

ಪ್ರತಿಕ್ರಿಯಿಸಿ (+)