ಶನಿವಾರ, ಮೇ 8, 2021
19 °C

ಆರೋಗ್ಯಶ್ರೀ ಯೋಜನೆ ಸದ್ಬಳಕೆಗೆ ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಆರೋಗ್ಯಶ್ರೀ ಯೋಜನೆ ಸದ್ಬಳಕೆಗೆ ಸಲಹೆ

ತಿ.ನರಸೀಪುರ: ಬಡತನ ರೇಖೆಗಿಂತ ಕೆಳಗಿನ (ಬಿಪಿಎಲ್) ಕುಟುಂಬದವರು ಗಂಭೀರ ಕಾಯಿಲೆಗಳಿಗೆ ವಾಜಪೇಯಿ ಆರೋಗ್ಯಶ್ರಿ ಯೋಜನೆಯಡಿ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ ಎಂದು ಆರೋಗ್ಯಶ್ರೀ ಯೋಜನೆಯ ಮೈಸೂರು ವಿಭಾಗದ ಪ್ರಾದೇಶಿಕ ಸಲಹೆಗಾರ ಡಾ.ರಮೇಶ್ ತಿಳಿಸಿದರು.ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಭಾನುವಾರ ನಡೆದ ವಾಜಪೇಯಿ ಆರೋಗ್ಯಶ್ರಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಬಡವರಿಗಾಗಿ ಈ ಯೋಜನೆ ಜಾರಿಗೊಳಿಸಲಾಗಿದೆ. ಕ್ಯಾನ್ಸರ್, ಮೂತ್ರಪಿಂಡದ ತೊಂದರೆ, ನರರೋಗ, ಅಪಘಾತ, ಸುಟ್ಟಗಾಯ ಮತ್ತ ನವಜಾತ ಶಿಶುಗಳ ಕಾಯಿಲೆ- ಶಸ್ತ್ರ ಚಿಕಿತ್ಸೆ, ಔಷಧಿ ಹಾಗೂ ಆಸ್ಪತ್ರೆಗೆ ಬಂದು ಹೋಗುವ ವೆಚ್ಚವನ್ನು ಸಂಪೂರ್ಣವಾಗಿ ಭರಿಸಲಾಗುವುದು. ಈ ಯೋಜನೆಯಡಿ ಬಿಪಿಎಲ್ ಕುಟುಂಬದ ಐವರು ಸದಸ್ಯರು ಉಚಿತವಾಗಿ ಚಿಕಿತ್ಸೆ ಪಡೆಯಬಹುದಾಗಿದೆ ಎಂದು ತಿಳಿಸಿದರು.ಭಾರತ್ ಕ್ಯಾನ್ಸರ್ ಆಸ್ಪತ್ರೆ, ಬಸಪ್ಪ ಸ್ಮಾರಕ ಆಸ್ಪತ್ರೆ, ನಾರಾಯಣ ಹೃದಯಾಲಯ ಇನ್ನು ಕೆಲ ಆಸ್ಪತ್ರೆಗಳು ಈ ಯೋಜನೆ ವ್ಯಾಪ್ತಿಗೆ ಒಳಪಡಲಿವೆ. ಆರೋಗ್ಯ ಮಿತ್ರ ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಕಾಯಿಲೆಗಳ ಬಗ್ಗೆ ದೃಢಪಡಿಸಿಕೊಂಡು ಚಿಕಿತ್ಸೆ ಪಡೆದುಕೊಳ್ಳಲು ಸಲಹೆ ನೀಡಿದರುಈ ಯೋಜನೆಯಡಿ ಈಗಾಗಲೇ ಕಾಯಿಲೆ ದೃಢಪಟ್ಟ 22 ರೋಗಿಗಳನ್ನು ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ಕಳುಹಿಸಲಾಗಿದೆ. 110 ರೋಗಿಗಳು ನೋಂದಣಿ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು. ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಅಂದಾನಿ ಕಾರ್ಯಕ್ರಮ ಉದ್ಘಾಟಿಸಿದರು. ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಗೋವಿಂದಶೆಟ್ಟಿ, ಡಾ.ನಿರಂಜನ್, ಡಾ.ತ್ರಿಪಾಲ್, ಶ್ರೀನಿವಾಸ್ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.