ಆರೋಗ್ಯ ಕಾರ್ಯಕರ್ತರ ಕೊರತೆ: ಮಕ್ಕಳ ಜೀವಕ್ಕೆ ಅಪಾಯ

ಬುಧವಾರ, ಮೇ 22, 2019
34 °C

ಆರೋಗ್ಯ ಕಾರ್ಯಕರ್ತರ ಕೊರತೆ: ಮಕ್ಕಳ ಜೀವಕ್ಕೆ ಅಪಾಯ

Published:
Updated:

ನವದೆಹಲಿ, (ಪಿಟಿಐ): ದೇಶದಲ್ಲಿ 26 ಲಕ್ಷಕ್ಕೂ ಹೆಚ್ಚು ಆರೋಗ್ಯ ಕಾರ್ಯಕರ್ತರ ಕೊರತೆ ಕಂಡುಬಂದಿದ್ದು, ಇದರಿಂದಾಗಿ ಐದು ವರ್ಷ ಪೂರ್ಣಗೊಳಿಸುವುದರ ಒಳಗಾಗಿ ಸಾಯುವ ಮಕ್ಕಳ ಸಂಖ್ಯೆ ಐದು ಪಟ್ಟು ಹೆಚ್ಚಾಗಿದೆ ಎಂದು ಹೊಸ ಅಧ್ಯಯನವೊಂದು ತಿಳಿಸಿದೆ.ಸುಲಭವಾಗಿ ಚಿಕಿತ್ಸೆ ನೀಡಬಹುದಾದ ನ್ಯುಮೋನಿಯ ಮತ್ತು ಅತಿಸಾರಕ್ಕೆ ಹೆಚ್ಚು ಮಕ್ಕಳು ತುತ್ತಾಗುತ್ತಿದ್ದಾರೆ. ತರಬೇತಿ ಪಡೆದ ಆರೋಗ್ಯ ಕಾರ್ಯಕರ್ತರ ಕೊರತೆಯೇ ಇದಕ್ಕೆ ಕಾರಣ ಎಂದು ಅಂತರ ರಾಷ್ಟ್ರೀಯ ಸರ್ಕಾರೇತರ ಸಂಸ್ಥೆಯಾದ `ಸೇವ್ ದಿ ಚಿಲ್ಡ್ರನ್~ ವರದಿ ತಿಳಿಸಿದೆ.49 ಅಭಿವೃದ್ಧಿಶೀಲ ದೇಶಗಳಲ್ಲಿ 35 ಲಕ್ಷಕ್ಕೂ ಹೆಚ್ಚು ಆರೋಗ್ಯ ಕಾರ್ಯಕರ್ತರ ನೇಮಕಾತಿಗಾಗಿ ಹಣ ಸಂಗ್ರಹಿಸಲು ವಿಶ್ವಸಂಸ್ಥೆಯ ಮಹಾಸಭೆಯ ಅಧಿವೇಶನದ ಸಮಯದಲ್ಲಿ ಒತ್ತು ನೀಡಿದ ವೇಳೆಯಲ್ಲಿಯೇ ಈ ಹೊಸ ಅಧ್ಯಯನ ವರದಿ ಬಹಿರಂಗಗೊಂಡಿದೆ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry