ಶುಕ್ರವಾರ, ಆಗಸ್ಟ್ 6, 2021
21 °C

ಆರೋಗ್ಯ ಕೇಂದ್ರಕ್ಕೆ ಬೀಗ ಜಡಿದು ಆಕ್ರೋಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸರಗೂರು: ಸಮೀಪದ ದಡದಹಳ್ಳಿ ಗ್ರಾಮಸ್ಥರು ದಡದಹಳ್ಳಿ ಮಠದ ಷಡಾಕ್ಷರಸ್ವಾಮಿ ಅವರ ನೇತೃತ್ವದಲ್ಲಿ ಸೋಮವಾರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬೀಗ ಜಡಿದು ಪತ್ರಿಭಟನೆ ನಡೆಸಿದರು.ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಟೆಂಡರ್ ಮಹೇಶ್ ಹೊರತುಪಡಿಸಿದರೆ ಯಾರೂ ಇಲ್ಲ. ಈ ಮೊದಲು ಕಾರ್ಯನಿರ್ವಹಿಸುತ್ತಿದ್ದ ಡಾ. ಮುರುಗೇಶ್ ಅವರು ಹೆಚ್ಚಿನ ವ್ಯಾಸಂಗಕ್ಕೆ ತೆರಳಿದ್ದಾರೆ. ಅವರ ಜಾಗಕ್ಕೆ ಎನ್. ಬೇಗೂರು ಗ್ರಾಮದ ವೈದ್ಯ ಡಾ. ಭರತ್ ಅವರನ್ನು ನೇಮಕ ಮಾಡಿದರೂ ಅವರು ಸರಿಯಾಗಿ ಬರುತ್ತಿಲ್ಲ.    ಬಿ. ಮಟಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರನ್ನು ವಾರದಲ್ಲಿ ಎರಡು ದಿನ ನಿಯೋಜಿಸಲಾಗಿದ್ದರೂ ಅವರು ಕೂಡ ಹೆಚ್ಚಿನ ವ್ಯಾಸಂಗಕ್ಕೆ ತೆರಳಿದ್ದಾರೆ ಎಂದು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು.ಷಡಕ್ಷರಸ್ವಾಮೀಜಿ ಮಾತನಾಡಿ, ಜನಸಾಮಾನ್ಯರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಮಠದ ವತಿಯಿಂದ ಆಸ್ಪತ್ರೆ ನಿರ್ಮಾಣಕ್ಕೆ ನಿವೇಶನ ನೀಡಲಾಗಿದೆ. ಆ ಸ್ಥಳದಲ್ಲಿ ಆಸ್ಪತ್ರೆಯನ್ನು ನಿರ್ಮಿಸಲಾಗಿದೆಯಾದರೂ ಸರ್ಕಾರ ವೈದ್ಯರನ್ನು ನೇಮಕ ಮಾಡಿಲ್ಲ. ಜನರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ. ಎಂದು ಬೇಸರ ವ್ಯಕ್ತ ಪಡಿಸಿದರು. ಹಂಚೀಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ, ಸದಸ್ಯ ಮೂರ್ತಾಚಾರ್, ದಡದಹಳ್ಳಿ ಗ್ರಾಮದ ಮುಖಂಡ ಮಲ್ಲಣ್ಣ, ಚನ್ನಬಸವಪ್ಪ, ಚಿಕ್ಕದೇವನಾಯಕ, ವಣಕರಯ್ಯ, ಹಾಗೂ ದಡದಹಳ್ಳಿಹಾಡಿ ಮಹಿಳೆಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.