ಗೋಕಾಕ: ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನಗರದಲ್ಲಿ 13.61 ಕೋಟಿ ರೂಪಾಯಿಗಳ ವೆಚ್ಚದಲ್ಲಿ 98 ಹಾಸಿಗೆಯ ತಾಯಿ- ಮಗು ಆರೋಗ್ಯ ಕೇಂದ್ರ ಸ್ಥಾಪನೆಗೆ ಮಂಜೂರಾತಿ ದೊರಕಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

ಭಾನುವಾರ ಇಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಹಳ ಹಿಂದೆಯೇ ಈ ನಿಟ್ಟಿನಲ್ಲಿ ಸಲ್ಲಿಸಲಾಗಿದ್ದ ಪ್ರಸ್ತಾವನೆಗೆ ಈ ಮನ್ನಣೆ ಸಿಕ್ಕಂತಾಗಿದೆ ಎಂದು ಅಭಿಪ್ರಾಯಪಟ್ಟರು.

ಕೇಂದ್ರ ಸ್ಥಾಪನೆಗಾಗಿ ಈಗಾಗಲೇ 4 ಕೋಟಿ ರೂಪಾಯಿ ಬಿಡುಗಡೆಯಾಗಿದ್ದು, ನಿರ್ಮಾಣ ಕಾಮಗಾರಿಗೆ ಶೀಘ್ರವೇ ಚಾಲನೆ ನೀಡಲಾಗುವುದು ಎಂದೂ ತಿಳಿಸಿದರು.

ಈಗಿರುವ ಸಾರ್ವಜನಿಕ ಆಸ್ಪತ್ರೆಯಲ್ಲಿಯೇ ತಾಯಿ-ಮಗು ಆರೋಗ್ಯ ಕೇಂದ್ರವನ್ನು ಸ್ಥಾಪಿಸುವ ಉದ್ದೇಶ ಹೊಂದಲಾಗಿದೆ. ನುರಿತ ತಜ್ಞವೈದ್ಯರು, ತಾಯಿ, ಮಗುವಿನ ಆರೈಕೆಗಾಗಿ ಅಗತ್ಯವಿರುವ ಅಗತ್ಯ ಸೌಲಭ್ಯಗಳನ್ನು ಹೊಂದಿರುವ ಈ ಆಸ್ಪತ್ರೆ ಜಿಲ್ಲೆಯಲ್ಲಿಯೇ ಇಂತಹ ಮೊದಲ ಕೇಂದ್ರವಾಗಲಿದೆ. ಅಲ್ಲದೇ, ಈ ಕೇಂದ್ರಕ್ಕೆ ಅಗತ್ಯವಿರುವ ಸಿಬ್ಬಂದಿಯನ್ನು ರಾಜ್ಯ ಸರ್ಕಾರ ಒದಗಿಸಲಿದೆ ಎಂದರು.

ಈಗಿರುವ ಸಾರ್ವಜನಿಕ ಆಸ್ಪತ್ರೆಯನ್ನು 100 ಹಾಸಿಗೆಗಳ ಸಾಮರ್ಥ್ಯಕ್ಕೆ ಮೇಲ್ದರ್ಜೆಗೇರಿಸಲಾಗಿದೆ. ನೂತನವಾಗಿ ಆರಂಭಗೊಳ್ಳಲಿರುವ ತಾಯಿ-ಮಗು ಆರೋಗ್ಯ ಕೇಂದ್ರದ ಪ್ರಯೋಜನ ಸಹ ತಾಲ್ಲೂಕಿನ ಜನತೆಗೆ ದೊರಕಲಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.