ಶನಿವಾರ, ಮೇ 21, 2022
28 °C

ಆರೋಗ್ಯ ಕೇಂದ್ರ ಶೀಘ್ರ ಉದ್ಘಾಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊನ್ನಾಳಿ: ಗ್ರಾಮೀಣರ ಆರೋಗ್ಯ ರಕ್ಷಣೆಗೆ ಸರ್ಕಾರ ಸಾಕಷ್ಟು ಹಣ ವ್ಯಯಿಸುತ್ತಿದೆ ಎಂದು ಅಬಕಾರಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದರು.ತಾಲ್ಲೂಕಿನ ಕ್ಯಾಸಿನಕೆರೆ ಗ್ರಾಮದ ಪರಿಶಿಷ್ಟ ಜಾತಿ, ಪಂಗಡದ ಕಾಲೊನಿಗೆ ವಿಶೇಷ ಘಟಕ ಯೋಜನೆಯಲ್ಲಿ ಮಂಜೂರಾದ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಈಚೆಗೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.

ಕ್ಯಾಸಿನಕೆರೆ ಗ್ರಾಮದಲ್ಲಿ ್ಙ 82 ಲಕ್ಷ ವೆಚ್ಚದಲ್ಲಿ ಪ್ರಾಥಮಿಕ ಆರೋಗ್ಯ  ಕೇಂದ್ರ ನಿರ್ಮಾಣಗೊಳ್ಳುತ್ತಿದೆ.ಶೀಘ್ರದಲ್ಲಿಯೇ ಸಾರ್ವಜನಿಕರ ಸೇವೆಗೆ ಸಮರ್ಪಿಸಲಾಗುವುದು. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.ಕ್ಯಾಸಿನಕೆರೆ ಗ್ರಾಮವನ್ನು ಸುವರ್ಣ ಗ್ರಾಮೋದಯ ಯೋಜನೆಯಡಿ ಅಭಿವೃದ್ಧಿಪಡಿಸಲಾಗಿದೆ. ್ಙ 1 ಕೋಟಿ ವೆಚ್ಚದಲ್ಲಿ ಉತ್ತಮವಾದ ಕಾಂಕ್ರೀಟ್ ರಸ್ತೆ, ಬಾಕ್ಸ್ ಚರಂಡಿ ನಿರ್ಮಿಸಲಾಗಿದೆ. ಗ್ರಾಮದ ಪರಿಶಿಷ್ಟ ಜಾತಿ, ಪಂಗಡದ ಕಾಲೊನಿಗೆ ್ಙ 50 ಲಕ್ಷ ಮಂಜೂರಾಗಿದೆ. ಕಾಲೊನಿಯಲ್ಲಿ ಸಕಲ ಮೂಲ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ.

 

ಶಾಸಕರ ಅನುದಾನದಲ್ಲಿ ಪ್ರಯಾಣಿಕರ ತಂಗುದಾಣಕ್ಕೆ ್ಙ 2.50 ಲಕ್ಷ, ಪ್ರಾಥಮಿಕ ಶಾಲಾ ಕೊಠಡಿಗೆ ರೂ. 7.50 ಲಕ್ಷ ನೀಡಲಾಗಿದೆ. ನೂತನ ಗ್ರಾಮ ಪಂಚಾಯ್ತಿ ಕಟ್ಟಡಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ವಿವರಿಸಿದರು.ಸಾಸ್ವೆಹಳ್ಳಿ ಜಿಲ್ಲಾ ಪಂಚಾಯ್ತಿ ಕ್ಷೇತ್ರಕ್ಕೆ ಒಟ್ಟು ್ಙ 13 ಕೋಟಿಗೂ ಅಧಿಕ ಅನುದಾನ ಮಂಜೂರಾಗಿದೆ. ಬೀರಗೊಂಡನಹಳ್ಳಿ ್ಙ 2.50 ಕೋಟಿ, ರಾಂಪುರ-10 ಲಕ್ಷ, ಹುಣಸಘಟ್ಟ-10 ಲಕ್ಷ, ಹೊಟ್ಯಾಪುರ-50 ಲಕ್ಷ, ಲಿಂಗಾಪುರ-35 ಲಕ್ಷ, ಹನಗವಾಡಿ- ್ಙ 20 ಲಕ್ಷ ಸೇರಿದಂತೆ ಅನೇಕ ಗ್ರಾಮಗಳಿಗೆ ಅನುದಾನ ನೀಡಲಾಗಿದ್ದು, ಈಗಾಗಲೇ ಟೆಂಡರ್ ಕರೆದು ಕಾಮಗಾರಿ ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು.ಹೊನ್ನಾಳಿ ತಾಲ್ಲೂಕಿನ ಸರ್ವಾಂಗೀಣ ಅಭಿವೃದ್ಧಿ ತಮ್ಮ ಗುರಿಯಾಗಿದೆ. ಈ ಉದ್ದೇಶ ಈಡೇರಿಕೆಗಾಗಿ ಹಲವಾರು ಶಾಶ್ವತ ಮತ್ತು ಮಹತ್ವಾಕಾಂಕ್ಷಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಪರಿಶಿಷ್ಟ ಜಾತಿ, ಪಂಗಡದವರು ಸಮಾಜದ ಮುಖ್ಯವಾಹಿನಿಗೆ ಬರಬೇಕು. ಅವರೂ ಎಲ್ಲರಂತೆ ತಲೆ ಎತ್ತಿ ಬಾಳಬೇಕು ಎಂಬ ಉದ್ದೇಶದಿಂದ ಬಹುತೇಕ ತಾಲ್ಲೂಕಿನ ಎಲ್ಲಾ ಕಾಲೊನಿಗಳಲ್ಲಿ ಮೂಲ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.ಸರ್ಕಾರದ ಯೋಜನೆಗಳು ಸದ್ಬಳಕೆಯಾಗಬೇಕು. ಇದಕ್ಕೆ ಜನತೆ ಸಹಕಾರ ನೀಡಬೇಕು ಎಂದು ವಿನಂತಿಸಿದರು.ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಕೆ.ಎಸ್. ಗಾಯತ್ರಮ್ಮ, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ರತ್ನಮ್ಮ ರಾಜಪ್ಪ, ಜಿಲ್ಲಾ ಪಂಚಾಯ್ತಿ ಸದಸ್ಯೆ ಶೀಲಾ ಗದ್ದಿಗೇಶ್, ವಿವಿಧ ಇಲಾಖೆಗಳ ಅಧಿಕಾರಿಗಳು, ಕ್ಯಾಸಿನಕೆರೆ ಗ್ರಾಮದ ಪ್ರಮುಖರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.