ಬೇಲೂರು: ಪಶ್ಚಿಮ ಘಟ್ಟ ಸಂಘಟನೆಗಳ ಒಕ್ಕೂಟ, ಆದಿಚುಂಚ ನಗಿರಿ ವೈದ್ಯಕೀಯ ಮಹಾವಿದ್ಯಾಲಯ, ಅಪೊಲೋ ಆಸ್ಪತ್ರೆ ಮೈಸೂರು, ನಾರಾಯಣ ಹೃದಯಾಲಯ, ಬೆಂಗಳೂರು ಮತ್ತು ಕಿದ್ವಾಯಿ ಸ್ಮಾರಕ ಗ್ರಂಥಿ(ಕ್ಯಾನ್ಸರ್) ಆಸ್ಪತ್ರೆ ಇವುಗಳ ಆಶ್ರಯದಲ್ಲಿ ಇಲ್ಲಿನ ವೀರಶೈವ ಕಲ್ಯಾಣ ಮಂಟಪದ ಮತ್ತು ಒಕ್ಕಲಿಗರ ಸಮುದಾಯ ಭವನದಲ್ಲಿ ಆಗಸ್ಟ್ 21ರ ಮಂಗಳವಾರ ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಮತ್ತು ಕ್ಯಾನ್ಸರ್ ತಪಾಸಣಾ ಶಿಬಿರ ಆಯೋಜಿಸಲಾಗಿದೆ.

ಹೃದಯರೋಗ, ನರರೋಗ, ಮೂತ್ರಪಿಂಡ, ಮೂತ್ರಾಂಗಗಳಲ್ಲಿ ಕಲ್ಲು, ಸಕ್ಕರೆ ರೋಗ, ಕೀಲು ಮತ್ತು ಮೂಳೆ ತಜ್ಞರು, ಶಸ್ತ್ರ ಚಿಕಿತ್ಸಾ ತಜ್ಞರು, ಗರ್ಭಿಣಿ ಮತ್ತು ಸ್ತ್ರೀರೋಗ ತಜ್ಞರು, ಮಾನಸಿಕ ತಜ್ಞರು, ಗಂಟಲು ಹಾಗೂ ಮಕ್ಕಳ ತಜ್ಞರು, ಕಣ್ಣು ಮತು ಚರ್ಮರೋಗಕ್ಕೆ ಸಂಬಂಧಿಸಿದ 200ಕ್ಕೂ ಹೆಚ್ಚು ತಜ್ಞ ವೈದ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಶಿಬಿರದ ಸಂಚಾಲಕ,ಮಾಜಿ ಶಾಸಕ ಎಚ್.ಎಂ. ವಿಶ್ವನಾಥ್ ತಿಳಿಸಿದ್ದಾರೆ.

ಬೆಳಿಗ್ಗೆ 9ಗಂಟೆಗೆ ಶಾಸಕ ವೈ.ಎನ್. ರುದ್ರೇಶ್ಗೌಡ ಶಿಬಿರ ಉದ್ಘಾಟಿಸ ಲಿದ್ದಾರೆ. ಆದಿಚುಂಚನಗಿರಿ ಮಹಾ ಸಂಸ್ಥಾನದ ಹಾಸನ ಶಾಖಾಮಠದ ಮಠಾಧೀಶ ಶಂಭುನಾಥ ಸ್ವಾಮೀಜಿ, ಪುಷ್ಪಗಿರಿ ಸಂಸ್ಥಾನದ ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ, ಮಾಜಿ ಶಾಸಕ ಎಸ್.ಎಚ್. ಪುಟ್ಟ ರಂಗನಾಥ್, ಪುರಸಭಾಧ್ಯಕ್ಷ ತೊ.ಚ. ಅನಂತ ಸುಬ್ಬರಾಯ, ಕಾಂಗ್ರೆಸ್ ಅಧ್ಯಕ್ಷ ಎ.ಎನ್. ಮಾಧವೇಗೌಡ, ತಾಲ್ಲೂಕು ಬಿಜೆಪಿ ಅಧ್ಯಕ್ಷ ರೇಣುಕುಮಾರ್, ಬಿಎಸ್ಪಿ ಅಧ್ಯಕ್ಷ ವೆಂಟೇಶ್ಗೌಡ, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಬಿ.ಸಿ. ಮಂಜುನಾಥ್ ಪಾಲ್ಗೊಳ್ಳಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.