ಮಂಗಳವಾರ, ಜೂನ್ 22, 2021
22 °C

ಆರೋಗ್ಯ ಯೋಜನೆ: ಸದ್ಬಳಕೆಗೆ ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೊಡ್ಡಬಳ್ಳಾಪುರ: ಗ್ರಾಮೀಣ ಪ್ರದೇಶದಲ್ಲಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸುವ ಸಲುವಾಗಿ ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿದ್ದು, ಇವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಾಲ್ಲೂಕು ಪಂಚಾಯಿತಿ ಸದಸ್ಯೆ ಶಾಮಲಮ್ಮ ಜಿ.ಲಕ್ಷ್ಮೀಪತಿ ಹೇಳಿದರು.ತಾಲ್ಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶನಿವಾರ ನಡೆದ ಸಮುದಾಯ ಆರೋಗ್ಯ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.ಸರ್ಕಾರಿ ಆಸ್ಪತ್ರೆಗಳಿಂದ ದೊರೆಯುವ ಸೌಲಭ್ಯಗಳನ್ನು ಮಹಿಳೆಯರಿಗೆ ಮನವರಿಕೆ ಮಾಡಿಕೊಡಲು ಹಾಗೂ ಮಕ್ಕಳಿಗೆ ಸೂಕ್ತ ಸಮಯದಲ್ಲಿ ಚುಚ್ಚುಮದ್ದುಗಳನ್ನು ಹಾಕಿಸಲು ಪ್ರತಿ ಗ್ರಾಮದಲ್ಲೂ `ಆಶಾ~ ಕಾರ್ಯಕರ್ತೆಯರನ್ನು ನೇಮಕ ಮಾಡಲಾಗಿದೆ.

 

ಇದಲ್ಲದೆ ಪ್ರತಿ ಗ್ರಾಮದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಗ್ರಾಮ ಪಂಚಾಯಿತಿ ಸದಸ್ಯರನ್ನು ಒಳಗೊಂಡ ಸಮಿತಿಗೆ ಗ್ರಾಮದಲ್ಲಿನ ಸ್ವಚ್ಛತೆ ಕಾಪಾಡಲು ಹತ್ತು ಸಾವಿರ ರೂಗಳ ಹಣಕಾಸಿನ ನೆರವು ನೀಡಲಾಗುತ್ತಿದೆ ಎಂದು ಹೇಳಿದರು. ತಾ.ಪಂ. ಅಧ್ಯಕ್ಷೆ ಉಷಾನರಸಿಂಹಮೂರ್ತಿ,ಕೊನಘಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಪಾಧ್ಯಕ್ಷೆ ಗಿರಿಜಮ್ಮ, ಕೊನಘಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರ ಡಾ.ನಿರ್ಮಲಾ ಇತರರು ಹಾಜರಿದ್ದರು. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.