ಆರೋಗ್ಯ ರಕ್ಷಣೆಗೆ ಜಾಗೃತಿ ಮುಖ್ಯ: ಡಾ.ಶಿವಕುಮಾರ್

7

ಆರೋಗ್ಯ ರಕ್ಷಣೆಗೆ ಜಾಗೃತಿ ಮುಖ್ಯ: ಡಾ.ಶಿವಕುಮಾರ್

Published:
Updated:

ಮೊಳಕಾಲ್ಮುರು: ಹದಿಹರೆಯದ ವಯಸ್ಸಿನಲ್ಲಿ ಮಕ್ಕಳು ದಾರಿ ತಪ್ಪದಂತೆ ಪೋಷಕರು ಎಚ್ಚರ ವಹಿಸಬೇಕು. ಜಾಗೃತಿಯೊಂದೇ ಸಮಸ್ಯೆ ನಿವಾರಣೆಗೆ ಸೂಕ್ತ ಮಾರ್ಗವಾಗಿದೆ ಎಂದು ವೈದ್ಯಾಧಿಕಾರಿ ಡಾ.ಶಿವಕುಮಾರ್ ಹೇಳಿದರು.ಇಲ್ಲಿನ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಜಿ.ಪಂ. ತಾ.ಪಂ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಆಶ್ರದಯದಲ್ಲಿ ಹಮ್ಮಿಕೊಂಡಿದ್ದ ಯುವಜನ ಮೇಳದಲ್ಲಿ ಅವರು ಮಾತನಾಡಿದರು.ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡಲು ಪ್ರಮುಖವಾಗಿ ಆರೋಗ್ಯ ಉತ್ತಮವಾಗಿರಬೇಕು. ಇದಕ್ಕಾಗಿ ಆರೋಗ್ಯ ಇಲಾಖೆ ಶಿಕ್ಷಣ ಇಲಾಖೆ ಜತೆಗೂಡಿ 10-19 ವಯೋಮಾನದ ಮಕ್ಕಳಿಗೆ ಅಗತ್ಯವಿರುವ ಆರೋಗ್ಯ ಹಾಗೂ ದುಶ್ಚಟಗಳಿಗೆ ಬಲಿಯಾಗದಂತೆ ಬೇಕಿರುವ ಅರಿವು ಮೂಡಿಸಲು ಮುಂದಾಗಿದೆ ಎಂದು ಮಾಹಿತಿ ನೀಡಿದರು.ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಡಿ. ಚಿದಾನಂದಪ್ಪ, ಶಿಕ್ಷಕ ವೀರಪ್ಪ, ಬಿಪಿಎಂ ಅನಿತಾ, ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಎನ್. ಓಬಳೇಶಪ್ಪ, ಕೃಷ್ಣಪ್ಪ ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry