ಬುಧವಾರ, ಏಪ್ರಿಲ್ 21, 2021
32 °C

ಆರೋಗ್ಯ ವಲಯಕ್ಕೆ ಹೆಚ್ಚಿನ ಆದ್ಯತೆ : ಪ್ರಧಾನಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಆರೋಗ್ಯ ವಲಯಕ್ಕೆ ಹೆಚ್ಚಿನ ಆದ್ಯತೆ : ಪ್ರಧಾನಿ

ನವದೆಹಲಿ (ಪಿಟಿಐ) : ದೇಶದ ಆರೋಗ್ಯ ವಲಯ ಎದುರಿಸುತ್ತಿರುವ ಸವಾಲುಗಳನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ 12ನೇ ಪಂಚವಾರ್ಷಿಕ ಯೋಜನೆಯ ಹಣಕಾಸು ಹಂಚಿಕೆಯಲ್ಲಿ ಆರೋಗ್ಯ ವಲಯದ ಪಾಲನ್ನು ಮೂರು ಪಟ್ಟು ಹೆಚ್ಚಿಸುವುದಾಗಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಶನಿವಾರ ತಿಳಿಸಿದರು.ಇಲ್ಲಿನ ಲೇಡಿ ಹಾರ್ಡಿಂಜ್ ವೈದ್ಯಕೀಯ ಕಾಲೇಜಿನಲ್ಲಿ ಪುನರ್‌ಅಭಿವೃದ್ಧಿ ಯೋಜನೆ ಶಿಲಾನ್ಯಾಸ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು ~ಬಡಜನರ ಆರೋಗ್ಯ ಸುಧಾರಣೆಗಾಗಿ, ದೇಶದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಔಷಧಿ ವಿತರಣೆ ವ್ಯವಸ್ಥೆ ಜಾರಿಗೆ ತರುವುದಾಗಿ ತಿಳಿಸಿದರು.

ಇದೇ ವೇಳೆ, 12ನೇ ಪಂಚವಾರ್ಷಿಕ ಯೋಜನೆಯಲ್ಲಿ ವೈದ್ಯಕೀಯ ಸಂಸ್ಥೆಗಳ ಸಾಮರ್ಥ್ಯ ಸುಧಾರಿಸುವ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸುವುದು ಸೇರಿದಂತೆ ಉತ್ತಮ ಆಹಾರ, ಕುಡಿಯುವ ನೀರಿನ ರಕ್ಷಣೆ, ನೈರ್ಮಲ್ಯ, ವಸತಿ ಮತ್ತು ಶಿಕ್ಷಣ ಅದರಲ್ಲೂ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವುದಾಗಿ ಹೇಳಿದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.