ಆರೋಪಿಗಳ ಜಾಮೀನು ಅರ್ಜಿ ತಿರಸ್ಕೃತ

7
ಮಲ್ಲೇಶ್ವರ ಬಾಂಬ್‌ ಸ್ಫೋಟ ಪ್ರಕರಣ

ಆರೋಪಿಗಳ ಜಾಮೀನು ಅರ್ಜಿ ತಿರಸ್ಕೃತ

Published:
Updated:

ಬೆಂಗಳೂರು: ಇಲ್ಲಿನ ಮಲ್ಲೇಶ್ವರದ ಬಿಜೆಪಿ ಕಚೇರಿ ಬಳಿ ಸಂಭವಿಸಿದ ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ಜಾಮೀನು ಅರ್ಜಿಯನ್ನು  ಹೈಕೋರ್ಟ್‌ ತಿರಸ್ಕರಿಸಿದೆ. ಆರೋಪಿಗಳಾದ ಸದ್ದಾಂ ಹುಸೇನ್‌ ಮತ್ತು ಮೊಹಿದ್ದೀನ್‌ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಆನಂದ್‌ ತಿರಸ್ಕರಿಸಿದರು.ಕೆರೆ ಒತ್ತುವರಿ ನೋಟಿಸ್‌ಗೆ ತಡೆಯಾಜ್ಞೆ

ನಗರದ ಬೈರಸಂದ್ರ ಕೆರೆ ಒತ್ತುವರಿ ಮಾಡಿ ಕಟ್ಟಡ ನಿರ್ಮಿಸಲಾಗಿದೆ ಎಂದು ಆರೋಪಿಸಿ ಬಾಗಮನೆ ಟೆಕ್‌ಪಾರ್ಕ್‌ಗೆ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಬೈರಸಂದ್ರ ಕೆರೆಯ 1.26 ಎಕರೆ ಪ್ರದೇಶವನ್ನು ಒತ್ತುವರಿ ಮಾಡಿ ಬಹುಮಹಡಿ ಕಟ್ಟಡ ನಿರ್ಮಿಸಲಾಗಿದೆ. ಈ ಕಟ್ಟಡವನ್ನು ತೆರವುಗೊಳಿಸಿ ಇಲ್ಲವೇ, ಅದನು್ನ ಒಡೆದು ಹಾಕಲಾಗುವುದು ಎಂದು  ತಹಶೀಲ್ದಾರ್‌ ಅವರು ಕಳೆದ ತಿಂಗಳು 30ರಂದು ನೋಟಿಸ್‌ ನೀಡಿದ್ದರು.ಈ ನೋಟಿಸ್‌ ರದ್ದುಪಡಿಸಬೇಕು ಎಂದು ಬಾಗಮನೆ ಟೆಕ್‌ ಪಾರ್ಕ್‌ ಹೈಕೋರ್ಟ್‌ನಲ್ಲಿ ಅರ್ಜಿ  ಸಲ್ಲಿಸಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ನೋಟಿಸ್‌ಗೆ ತಡೆಯಾಜ್ಞೆ ನೀಡಿ, ತಕರಾರು ಅರ್ಜಿ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry