ಭಾನುವಾರ, ಮೇ 9, 2021
27 °C

ಆರೋಪಿ ರಾಜೇಶ್ ಪೊಲೀಸ್ ವಶಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಎಂ.ಜಿ.ರಸ್ತೆಯ ಮೆಯೋಹಾಲ್ ಜಂಕ್ಷನ್ ಸಮೀಪ ಕಾರು ಮತ್ತು ಆಟೊ ನಡುವೆ ಸಂಭವಿಸಿದ್ದ ಅಪಘಾತ ಪ್ರಕರಣ ಸಂಬಂಧ ಬಂಧಿತನಾಗಿರುವ ಆರೋಪಿ ರಾಜೇಶ್ ಎಲ್.ರೆಡ್ಡಿಯನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ನಗರದ 11ನೇ ಎಸಿಎಂಎಂ ನ್ಯಾಯಾಲಯ ಬುಧವಾರ ಆದೇಶ ಹೊರಡಿಸಿದೆ.ರಾಜೇಶ್‌ನ ನ್ಯಾಯಾಂಗ ಬಂಧನದ ಅವಧಿ ಕೊನೆಗೊಂಡ ಹಿನ್ನೆಲೆಯಲ್ಲಿ ಪ್ರಕರಣದ ತನಿಖಾಧಿಕಾರಿಗಳು ಆತನನ್ನು ಬುಧವಾರ ಮಧ್ಯಾಹ್ನ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಈ ವೇಳೆ ಆರೋಪಿ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರು, ಆರೋಪಿಗೆ ಜಾಮೀನು ನಿರಾಕರಿಸಿ ಜೂ.7ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ಹೊರಡಿಸಿದರು.`ರಾಜೇಶ್, ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಪಾನಮತ್ತನಾಗಿ ಕಾರು ಚಾಲನೆ ಮಾಡುತ್ತಿದ್ದೆ ಎಂದು ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ. ಆತನಿಗೆ ವೈದ್ಯಕೀಯ ಪರೀಕ್ಷೆ ಮಾಡಿದ್ದ ಬೌರಿಂಗ್ ಆಸ್ಪತ್ರೆ ವೈದ್ಯರು ನಾಲ್ಕೈದು ದಿನಗಳಲ್ಲಿ ವರದಿ ನೀಡಲಿದ್ದಾರೆ.ಆತನ ರಕ್ತ ಮತ್ತು ಮೂತ್ರದ ಮಾದರಿಯನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್) ಕಳುಹಿಸಿದ್ದು, ಸದ್ಯದಲ್ಲೇ ಎಫ್‌ಎಸ್‌ಎಲ್ ವರದಿ ಬರಲಿದೆ.ವರದಿ  ನಂತರ ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ಸಿಗಲಿದೆ' ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಈ ಸಂದರ್ಭದಲ್ಲಿ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.