ಭಾನುವಾರ, ಮೇ 22, 2022
21 °C

ಆರೋಪಿ ರಾಜ್‌ಕುಮಾರ್ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:  ಚಿಕ್ಕಜಾಲ ಸಮೀಪದ ಸೊಣ್ಣಪ್ಪನಹಳ್ಳಿಯಲ್ಲಿ ನಡೆದಿದ್ದ ಪ್ರೇಮ್‌ಚಂದ್‌ಸಿಂಗ್ ಕೊಲೆ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಛತ್ತೀಸ್‌ಗಡ ಮೂಲದ ರಾಜ್‌ಕುಮಾರ್ (21) ಎಂಬುವನನ್ನು ಬಂಧಿಸಿದ್ದಾರೆ. ಉತ್ತರಪ್ರದೇಶದ ಪ್ರೇಮ್‌ಚಂದ್‌ಸಿಂಗ್ ಕೂಲಿ ಕೆಲಸ ಮಾಡಲು ನಗರಕ್ಕೆ ಬಂದಿದ್ದರು. ಸೊಣ್ಣಪ್ಪನಹಳ್ಳಿಯಲ್ಲಿ ಬಾಡಿಗೆ ಮನೆ ಪಡೆದು ಮೂವರು ಸ್ನೇಹಿತರೊಂದಿಗೆ ವಾಸಿಸುತ್ತಿದ್ದರು. ಮೇ 10ರಂದು ಆ ಮನೆಯಲ್ಲೇ ಅಸ್ಥಿಪಂಜರದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿತ್ತು. ಈ ಬಗ್ಗೆ ಮನೆ ಮಾಲೀಕರಾದ ಮುತ್ತಮ್ಮ ಚಿಕ್ಕಜಾಲ ಠಾಣೆಗೆ ದೂರು ನೀಡಿದ್ದರು.  ಮೃತರ ಸ್ನೇಹಿತರ ಮೇಲೆ ಅನುಮಾನಗೊಂಡ ಪೊಲೀಸರು, ಉತ್ತರಪ್ರದೇಶದಲ್ಲಿ ಮೂವರನ್ನೂ ವಶಕ್ಕೆ ತೆಗೆದುಕೊಂಡು ವಿಚಾರಣೆಗೆ ಒಳಪಡಿಸಿದಾಗ ರಾಜ್‌ಕುಮಾರ್ ಕೊಲೆ ಆರೋಪಿ ಎಂಬುದು ಗೊತ್ತಾಯಿತು.

 ಪ್ರೇಮ್‌ಚಂದ್ ಹಾಗೂ ರಾಜ್‌ಕುಮಾರ್ ನಡುವೆ ಹಣಕಾಸಿನ ವಿಚಾರದಲ್ಲಿ ಭಿನ್ನಾಭಿಪ್ರಾಯವಿತ್ತು.ಈ ವಿಷಯವಾಗಿ ನಡೆದ ಜಗಳದಲ್ಲಿ ರಾಜ್‌ಕುಮಾರ್‌ನ ಮೊಬೈಲ್ ಪ್ರೇಮ್‌ಚಂದ್ ಒಡೆದು ಹಾಕಿದ್ದರು. ಇದರಿಂದ ಕೋಪಗೊಂಡಿದ್ದ ಆತ, 2011ರ ಡಿಸೆಂಬರ್ 27 ರಂದು ಮಲಗಿದ್ದ ಪ್ರೇಮ್‌ಚಂದ್ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದ ಎಂದು ಪೊಲೀಸರು ಹೇಳಿದ್ದಾರೆ.ಆತ್ಮಹತ್ಯೆ: ಲಗ್ಗೆರೆ ಬಳಿಯ ಲಕ್ಷ್ಮಿದೇವಿನಗರ ಐದನೇ ಅಡ್ಡರಸ್ತೆ ನಿವಾಸಿ ಶಿವಕುಮಾರ್ (34)  ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಗಾರೆ ಕೆಲಸ ಮಾಡುತ್ತಿದ್ದ ಅವರು ಪತ್ನಿ ಹೇಮಾ ಮತ್ತು ತಾಯಿ ಪಾರ್ವತಮ್ಮ ಅವರ ಜತೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಹೇಮಾ ಅವರು ಕೊಳ್ಳೇಗಾಲದಲ್ಲಿರುವ ತವರು ಮನೆಗೆ ಹೋಗಿದ್ದರು. ಪಾರ್ವತಮ್ಮ ಅವರು ಬುಧವಾರ (ಮೇ 30) ರಾತ್ರಿ ಹೊರಗೆ ಹೋಗಿದ್ದ ಸಂದರ್ಭದಲ್ಲಿ ಶಿವಕುಮಾರ್ ಮನೆಯಲ್ಲೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದರು.ಅವರನ್ನು ಅಕ್ಕಪಕ್ಕದ ಮನೆಯವರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಶುಕ್ರವಾರ ನಸುಕಿನಲ್ಲಿ ಅವರು ಸಾವನ್ನಪ್ಪಿದರು ಎಂದು ಪೊಲೀಸರು ತಿಳಿಸಿದ್ದಾರೆ.ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.