ಶುಕ್ರವಾರ, ಮೇ 20, 2022
20 °C

ಆರೋಪ ತನಿಖೆಯಾಗಲಿ: ಕೇಜ್ರಿವಾಲ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗಾಜಿಯಾಬಾದ್ (ಪಿಟಿಐ): ರಾಷ್ಟ್ರಪತಿ ಸ್ಥಾನಕ್ಕೆ ಯುಪಿಎ  ಅಭ್ಯರ್ಥಿ ಪ್ರಣವ್ ಮುಖರ್ಜಿ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಅಣ್ಣಾ ತಂಡದ ಸದಸ್ಯ ಅರವಿಂದ್ ಕೇಜ್ರಿವಾಲ್, ಮುಖರ್ಜಿ ವಿರುದ್ಧ ತಾವು ಮಾಡಿರುವ ಆರೋಪಗಳ ಕುರಿತು ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.ಪ್ರಧಾನಿ ಮನಮೋಹನ್ ಸಿಂಗ್, ಹಣಕಾಸು ಸಚಿವ ಪ್ರಣವ್ ಮುಖರ್ಜಿ ಹಾಗೂ ಇತರ 13 ಮಂದಿ ಸಚಿವರ ವಿರುದ್ಧ ಅಣ್ಣಾ ತಂಡ ಮೇ 26ರಂದು ಆರೋಪ ಹೊರಿಸಿತ್ತಲ್ಲದೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿತ್ತು.

ರಾಷ್ಟ್ರದ ಅತ್ಯುನ್ನತ ಹುದ್ದೆಯನ್ನು ಅಲಂಕರಿಸುವ ವ್ಯಕ್ತಿ ಎಲ್ಲವನ್ನೂ ಮೀರಿದವರಾಗಿರಬೇಕು ಎಂದು ಕೇಜ್ರಿವಾಲ್ ಹೇಳಿದರು.ಪ್ರಣವ್ ಪ್ರತಿಕ್ರಿಯೆ: ಕೇಜ್ರಿವಾಲ್ ಆರೋಪವನ್ನು ತಳ್ಳಿ ಹಾಕಿರುವ ಮುಖರ್ಜಿ, ಆರೋಪ ರಾಜಕೀಯ ಪ್ರೇರಿತವಾಗಿದ್ದು, ನ್ಯಾಯಸಮ್ಮತವಲ್ಲ ಎಂದ್ದ್ದಿದಾರೆ.ಮಿತಿಮೀರಿದ ವರ್ತನೆ: ರಾಷ್ಟ್ರಪತಿ ಸ್ಥಾನಕ್ಕೆ ಯುಪಿಎ ಅಭ್ಯರ್ಥಿಯಾಗಿರುವ ಪ್ರಣವ್ ಮುಖರ್ಜಿ ಅವರ ವಿರುದ್ಧದ ಆರೋಪಗಳ ಕುರಿತು ಸ್ವತಂತ್ರ ತನಿಖೆ ನಡೆಸಬೇಕೆಂಬ ಅಣ್ಣಾ ತಂಡದ ಬೇಡಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ, ಅಣ್ಣಾ ತಂಡ ಸಂವಿಧಾನಕ್ಕೂ ಮೀರಿದ ಸಂಸ್ಥೆಯಂತೆ ವರ್ತಿಸಬಾರದು ಎಂದು ಎಚ್ಚರಿಸಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.