ಭಾನುವಾರ, ಫೆಬ್ರವರಿ 28, 2021
23 °C

ಆರೋಪ ನಿರಾಧಾರ: ಭಾಸ್ಕರ್‌ ರಾವ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಆರೋಪ ನಿರಾಧಾರ: ಭಾಸ್ಕರ್‌ ರಾವ್‌

ಬೆಂಗಳೂರು: ಲೋಕಾಯುಕ್ತ ಕಚೇರಿಯಲ್ಲಿ ನಡೆದಿದೆ ಎನ್ನಲಾಗಿರುವ ಅವ್ಯವಹಾರದಲ್ಲಿ  ತಮ್ಮ ಮಗನ ಪಾತ್ರವನ್ನು ಲೋಕಾಯುಕ್ತ ನ್ಯಾಯಮೂರ್ತಿ ವೈ. ಭಾಸ್ಕರ ರಾವ್‌ ಅಲ್ಲಗಳೆದಿದ್ದಾರೆ.ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಇದು ವ್ಯವಸ್ಥಿತ ಷಡ್ಯಂತ್ರ. ನನ್ನ ಮಗನ ಸಂಖ್ಯೆಯಿಂದ ಕರೆ ಹೋಗಿದೆ ಎಂದಿರುವ ದಿನ ಆತ ಹೈದರಾಬಾದ್‌ನಲ್ಲಿದ್ದ. ಈ ಪ್ರಕರಣದಲ್ಲಿ ನನ್ನ ಮಗನ ಪಾತ್ರವಿಲ್ಲ. ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕು ಎಂಬ ಉದ್ದೇಶದಿಂದಲೇ ವಿಶೇಷ ತನಿಖಾ ತಂಡ ರಚಿಸುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದೆ’ ಎಂದರು.‘ನನ್ನ ಮೇಲಿನ ಆರೋಪ ನಿರಾಧಾರ. ತನಿಖೆಗೆ ಎಲ್ಲ ರೀತಿಯ ಸಹಕಾರ ನೀಡುತ್ತೇನೆ. ವರದಿ ಬಂದ ನಂತರ ಆರೋಪ ಸಾಬೀತಾದರೆ ರಾಜೀನಾಮೆ ನೀಡುತ್ತೇನೆ’ ಎಂದು ಹೇಳಿದರು.* ಆರೋಪ ಎದುರಿಸುತ್ತಿರುವ ಲೋಕಾಯುಕ್ತ ನ್ಯಾಯಮೂರ್ತಿ ಭಾಸ್ಕರ್‌ರಾವ್‌  ರಾಜೀನಾಮೆ ನೀಡುವುದು ಸೂಕ್ತ.

-ಎಚ್‌.ಡಿ.ದೇವೇಗೌಡ

ಜೆಡಿಎಸ್‌ ರಾಷ್ಟ್ರೀಯ ಅಧ್ಯಕ

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.