ಶುಕ್ರವಾರ, ಜೂನ್ 18, 2021
23 °C

ಆರೋಪ ಸುಳ್ಳು: ರಾಜ್ಯಪಾಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:  ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿರುವ ಹೈಕೋರ್ಟ್ ಕ್ರಮವನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸುವ ವಿಚಾರದಲ್ಲಿ ನಾನು ತಲೆ ಹಾಕುವುದಿಲ್ಲ ಎಂದು ರಾಜ್ಯಪಾಲ ಎಚ್.ಆರ್. ಭಾರದ್ವಾಜ್ ಗುರುವಾರ ಇಲ್ಲಿ ಪ್ರತಿಕ್ರಿಯಿಸಿದರು.



ಏಳನೇ `ನ್ಯೂಟ್ರಾ ಇಂಡಿಯಾ~ ಸಮ್ಮೇಳನದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಲು ತಾನು ಸಿದ್ಧತೆ ನಡೆಸುತ್ತಿದ್ದೇನೆ ಎಂಬ ಆರೋಪಗಳನ್ನು ಸ್ಪಷ್ಟವಾಗಿ ತಳ್ಳಿ ಹಾಕಿದರು.  `ಇಂತಹ ಆರೋಪಗಳೆಲ್ಲಾ ಸತ್ಯಕ್ಕೆ ದೂರವಾದವು.



ನಿಮ್ಮ ಮಾಹಿತಿ ಸಂಪೂರ್ಣ ತಪ್ಪು. ಈ ವಿಚಾರದಲ್ಲಿ ನಾನು ತಲೆ ಹಾಕುವುದಿಲ್ಲ~ ಎಂದು ಹೇಳಿದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮ ಪ್ರತಿನಿಧಿಗಳ ಯಾವುದೇ ಪ್ರಶ್ನೆಗಳಿಗೆ ಉತ್ತರಿಸಲು ರಾಜ್ಯಪಾಲರು ನಿರಾಕರಿಸಿದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.