ಮಂಗಳವಾರ, ಜನವರಿ 21, 2020
20 °C

ಆರ್ಎಂಪಿ ವೈದ್ಯನ ಬಂಧನಕ್ಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿಡ್ಲಘಟ್ಟ: ತಾಲ್ಲೂಕಿನ ದ್ಯಾವಪ್ಪನಗುಡಿ ಗ್ರಾಮದಲ್ಲಿ ಚಿಕಿತ್ಸೆಗಾಗಿ ಬಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರ್‌.ಎಂ.ಪಿ. ವೈದ್ಯನ ಮೇಲೆ ಕ್ರಮ ಜರುಗಿಸುವಂತೆ ಒತ್ತಾಯಿಸಿ ಎಸ್‌.ಎಫ್‌.ಐ ನೇತೃತ್ವದಲ್ಲಿ ವಿವಿಧ ಶಾಲೆ– ಕಾಲೇಜು ವಿದ್ಯಾರ್ಥಿಗಳು ಮಂಗಳವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.

ವಿದ್ಯಾರ್ಥಿನಿ ಜತೆ ಅಸಭ್ಯವಾಗಿ ವರ್ತಿಸಿದ ಖಾಸಗಿ ಕ್ಲಿನಿಕ್‌ನ ಆರ್‌.ಎಂ.ಪಿ. ವೈದ್ಯ ವೆಂಕಟೇಶ್‌ನನ್ನು ಶಿಕ್ಷಿಸುವಂತೆ ವಿದ್ಯಾರ್ಥಿಗಳು ಒತ್ತಾಯಿಸಿದರು.ವಿದ್ಯಾರ್ಥಿನಿಯರಿಗೆ ಸೂಕ್ತ ರಕ್ಷಣೆ ನೀಡುವಲ್ಲಿ ತಾಲ್ಲೂಕು ಆಡಳಿತ ವಿಫಲ­ವಾಗಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಘೋಷಣೆ ಕೂಗಿದರು. ವೆಂಕಟೇಶ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.ಬಸ್‌ ನಿಲ್ದಾಣದಿಂದ ಘೋಷಣೆ ಕೂಗುತ್ತಾ ಮೆರವಣಿಗೆ ನಡೆಸಿದ ವಿದ್ಯಾರ್ಥಿ­ಗಳು, ತಾಲ್ಲೂಕು ಕಚೇರಿಗೆ ತೆರಳಿ ಗ್ರೇಡ್‌ 2 ತಹಶೀಲ್ದಾರ್‌ ರಮೇಶ್‌ ಅವರಿಗೆ ಮನವಿ ಪತ್ರ ಸಲ್ಲಿಸಿದರು.ಎಸ್‌.ಎಫ್‌.ಐ ಜಿಲ್ಲಾ ಸಂಚಾಲಕ ಮುನೀಂದ್ರ, ಸುಮತಿ, ಬಾಬುರೆಡ್ಡಿ, ಪುಷ್ಪಾ, ವೀಣಾ, ಮಂಜುಳಾ, ನಯನಶ್ರೀ, ವೆಂಕಟೇಶ್‌, ಮನೋಹರ್‌, ನಟರಾಜ್‌ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಪ್ರತಿಕ್ರಿಯಿಸಿ (+)