ಶನಿವಾರ, ಮೇ 15, 2021
24 °C

ಆರ್.ಕೆ.ನಾರಾಯಣ್ ಮನೆ ಸಂರಕ್ಷಣೆಗೆ ಸಚಿವರ ಆದೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪ್ರಸಿದ್ಧ ಲೇಖಕ  ಆರ್.ಕೆ. ನಾರಾಯಣ್ ಅವರ ಮೈಸೂರಿನ ಮನೆಯನ್ನು ಪಾರಂಪರಿಕ ಕಟ್ಟಡ ಎಂದು ಘೋಷಣೆ ಮಾಡಿ ಅದನ್ನು ಸಂರಕ್ಷಿಸಲು ನಗರಾಭಿವೃದ್ಧಿ ಸಚಿವ ಎಸ್.ಸುರೇಶ್‌ಕುಮಾರ್ ಆದೇಶ ನೀಡಿದ್ದಾರೆ.ಇಲ್ಲಿನ ಕೆಯುಐಡಿಎಫ್‌ಸಿ ಕಚೇರಿಯಲ್ಲಿ ನಗರಾಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ನಂತರ ಅವರು ಈ ಸೂಚನೆ ನೀಡಿದ್ದಾರೆ.`ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ ಕಲಂ 2 ಮತ್ತು ಕಲಂ 12 (1ಎಫ್) ಅನ್ವಯ ನಾರಾಯಣ್ ಮನೆಯನ್ನು ಪಾರಂಪರಿಕ ಕಟ್ಟಡ ಎಂದು ಘೋಷಣೆ ಮಾಡುವಂತೆ ಹಾಗೂ ಅದನ್ನು ಸಂರಕ್ಷಿಸಲು ಕೂಡಲೇ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸೂಚನೆ ನೀಡಿದ್ದೇನೆ~ ಎಂದು ಹೇಳಿದರು.ಈ ಸಂಬಂಧ ಅಗತ್ಯ ಸರ್ಕಾರಿ ಆದೇಶವನ್ನು ತುರ್ತಾಗಿ ಹೊರಡಿಸುವಂತೆ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ತಿಳಿಸಲಾಗಿದೆ ಎಂದು ಹೇಳಿದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.