ಸೋಮವಾರ, ಮೇ 16, 2022
28 °C

ಆರ್ಥಿಕ ಅಭಿವೃದ್ಧಿ: ಮಹಿಳೆಯರಿಗೆ ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶ್ರೀನಿವಾಸಪುರ: ಗ್ರಾಮೀಣ ಮಹಿಳೆಯರು  ಸರ್ಕಾರ ಮಹಿಳೆಯರ ಸಬಲೀಕರಣಕ್ಕಾಗಿ ನೀಡುತ್ತಿರುವ ನೆರವನ್ನು ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಸಲಹೆ ಮಾಡಿದರು.ಪಟ್ಟಣದಲ್ಲಿ ಈಚೆಗೆ ಏರ್ಪಡಿಸಲಾಗಿದ್ದ ಸಮಾರಂಭದಲ್ಲಿ ರೈತ ಶಕ್ತಿ ಗುಂಪಿಗೆ ರೂ. 10 ಸಾವಿರ ಚೆಕ್ ವಿತರಿಸಿ ಮಾತನಾಡಿದ ಅವರು, ಮಹಿಳೆಯರು ಕುಟುಂಬದ ಹೊಣೆಯನ್ನು ಹೊರವುದರಿಂದ ಕುಟುಂಬಕ್ಕೆ ಆರ್ಥಿಕ ಸ್ಥಿರತೆ ಅಗತ್ಯ. ಆ ದಿಸೆಯಲ್ಲಿ ಮಹಿಳೆ ಆರ್ಥಿಕ ಚಟುವಟಿಕೆಗಳಲ್ಲಿ ನೇರವಾಗಿ ಭಾಗವಹಿಸಬೇಕು. ಉದ್ಯಮಶೀಲತೆ ಅವರ ಭವಿಷ್ಯವನ್ನು ಉಜ್ವಲಗೊಳಿಸಲು ನೆರವಾಗುತ್ತದೆ ಎಂದು ಹೇಳಿದರು.ಮಹಿಳೆಯರು ಹೈನುಗಾರಿಕೆ, ಕೋಳಿ ಸಾಕಾಣಿಕೆ, ಗೃಹ ಕೈಗಾರಿಕೆ ಮುಂತಾದ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ರಾಜ್ಯದಲ್ಲಿಯೇ ಮೊದಲ ಬಾರಿಗೆ ತಾಲ್ಲೂಕಿನ ಸ್ತ್ರೀ ಶಕ್ತಿ ಸಂಘಗಳಿಗೆ ತಲಾ ರೂ. 1.25 ಲಕ್ಷ ನೆರವನ್ನು ಸರ್ಕಾರ ನೀಡುತ್ತಿದೆ.

 

ಈ ನೆರವನ್ನು ಪಡೆದುಕೊಳ್ಳಲು 50 ಸ್ತ್ರೀ ಶಕ್ತಿ ಸಂಘಗಳನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.ತಾ.ಪಂ. ಅಧ್ಯಕ್ಷ ವೈದ್ಯಂ ವೆಂಕಟರೆಡ್ಡಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು, ಉಪಾಧ್ಯಕ್ಷ ಆಂಜಿನಪ್ಪ,  ಗ್ರಾಪಂ ಸದಸ್ಯ ಗಣೇಶ್, ಜಿ.ಪಂ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸನ್, ಜಿ.ಪಂ. ಸದಸ್ಯೆ ರತ್ನಮ್ಮ ಕೃಷಿ ಇಲಾಖೆಸಹಾಯಕ ನಿರ್ದೇಶಕ ಮುನಿರಂಗಪ್ಪ, ಕೃಷಿ ಅಧಿಕಾರಿ ರವಿಕುಮಾರ್ ಇತರರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.