ಆರ್.ಪಿ. ಜಗದೀಶ್, ಜೋಶಿಗೆ ಬಸವರಾಜ ಕಟ್ಟೀಮನಿ ಪ್ರಶಸ್ತಿ

7

ಆರ್.ಪಿ. ಜಗದೀಶ್, ಜೋಶಿಗೆ ಬಸವರಾಜ ಕಟ್ಟೀಮನಿ ಪ್ರಶಸ್ತಿ

Published:
Updated:

ಬೆಳಗಾವಿ: ಬಸವರಾಜ ಕಟ್ಟೀಮನಿ ಪ್ರತಿಷ್ಠಾನ ನೀಡುವ ಬಸವರಾಜ ಕಟ್ಟಿಮನಿ ಪತ್ರಿಕಾ ಪ್ರಶಸ್ತಿಗೆ `ಪ್ರಜಾವಾಣಿ~ ನಿವೃತ್ತ ಸಹ ಸಂಪಾದಕ ಆರ್.ಪಿ.ಜಗದೀಶ್ ಹಾಗೂ ಹಿರಿಯ ಪತ್ರಕರ್ತ ರಾಘವೇಂದ್ರ ಜೋಶಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು  ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ.ಎಂ.ಕಲಬುರ್ಗಿ ಸೋಮವಾರ ಇಲ್ಲಿ ಹೇಳಿದರು.ಪ್ರಶಸ್ತಿ ಪ್ರದಾನ ಸಮಾರಂಭ ಇದೇ 5 ರಂದು ನಡೆಯಲಿದೆ. ಪ್ರತಿಷ್ಠಾನ ಅಸ್ತಿತ್ವಕ್ಕೆ ಬಂದ ನಂತರ ಚೊಚ್ಚಲ ಪ್ರಶಸ್ತಿ ಪ್ರದಾನ ಸಮಾರಂಭ ಇದಾಗಿದೆ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ  ತಿಳಿಸಿದರು. ಪತ್ರಿಕೆ, ಕಥೆ, ಕಾದಂಬರಿ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ. ಪ್ರಶಸ್ತಿಯು ತಲಾ 50,000 ರೂಪಾಯಿ ನಗದು ಹಾಗೂ ಫಲಕ ಒಳಗೊಂಡಿದೆ ಎಂದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry