ಮಂಗಳವಾರ, ಮೇ 11, 2021
19 °C

ಆರ್ಮಿ ಗ್ರೀನ್ ಶುಭಾರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಆರ್ಮಿ ಗ್ರೀನ್ ತಂಡ ಕೆಎಸ್‌ಎಚ್‌ಎ ಆಶ್ರಯದಲ್ಲಿ ಆರಂಭವಾದ ಓಜೋನ್ ಗ್ರೂಪ್ ರಾಷ್ಟ್ರೀಯ ಹಾಕಿ ಲೀಗ್ ಚಾಂಪಿಯನ್‌ಷಿಪ್‌ನ ಪಂದ್ಯದಲ್ಲಿ 5-4 ಗೋಲುಗಳಿಂದ ಮದ್ರಾಸ್ ಎಂಜಿನಿಯರಿಂಗ್ ಗ್ರೂಪ್ (ಎಂಇಜಿ) `ಎ~ ತಂಡವನ್ನು ಸೋಲಿಸಿ ಶುಭಾರಂಭ ಮಾಡಿತು.



ಅಕ್ಕಿ ತಿಮ್ಮನಹಳ್ಳಿ ರಾಜ್ಯ ಹಾಕಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಎಂಇಜಿ ತಂಡ ಆರಂಭಿಕ ಮುನ್ನಡೆ ಸಾಧಿಸಿದರೂ, ಸೋಲು ಅನುಭವಿಸಿತು. ವಿಜಯಿ ತಂಡದ ಅರುಣ್ ಕುಮಾರ್ 34ನೇ           ನಿಮಿಷದಲ್ಲಿ ಗೋಲಿನ ಖಾತೆ   ತೆರೆದರು.



 ಇದೇ ಆಟಗಾರ 44ನೇ ನಿಮಿಷದಲ್ಲಿ ಇನ್ನೊಂದು ಗೋಲನ್ನು ತಂದಿಟ್ಟರು. ಜಾನ್ ಜಸ್ರೋಷಿಯಾ (55ನೇ ನಿಮಿಷ), ರೋಮನ್ (65ನೇ ನಿ.) ಹಾಗೂ ಬಿನೋಯ್ ಭೇಂಗ್ರಾ (69ನೇ ನಿ.) ಗೋಲು ಗಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.