ಶುಕ್ರವಾರ, ಫೆಬ್ರವರಿ 26, 2021
22 °C
ನಿಷೇಧಾಜ್ಞೆ ನಡುವೆ ವ್ಯಕ್ತಿಗೆ ಚೂರಿ ಇರಿತ, ಗಂಭೀರ ಗಾಯ

ಆರ್‌ಎಸ್‌ಸ್ ಕಾರ್ಯಕರ್ತ ಕೊಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಆರ್‌ಎಸ್‌ಸ್ ಕಾರ್ಯಕರ್ತ ಕೊಲೆ

ಕುಶಾಲನಗರ (ಕೊಡಗು ಜಿಲ್ಲೆ): ಸಮೀಪದ ಗುಡ್ಡೆಹೊಸೂರು ಬಳಿ ಆರ್ಎಸ್ಎಸ್ ಕಾರ್ಯಕರ್ತ, ಆಟೊ ಚಾಲಕ ಪ್ರವೀಣ್‌ ಪೂಜಾರಿ ಅವರನ್ನು (34) ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ.ಘಟನೆಯ ಬಳಿಕ ಕುಶಾಲನಗರದಲ್ಲಿ ಪರಿಸ್ಥಿತಿ ಬಿಗುವಿನಿಂದ ಕೂಡಿದ್ದು ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ನಿಷೇಧಾಜ್ಞೆ ನಡುವೆ ಮತ್ತೊಂದು ಚೂರಿ ಇರಿತದ ಘಟನೆ ಸೋಮವಾರ ಸಂಜೆ ಪಟ್ಟಣದಲ್ಲಿ ನಡೆದಿದೆ. ಇರಿತಕ್ಕೆ ಒಳಗಾದ ಅಬ್ದುಲ್ ಖುದ್ದರ್ ಅವರ ಹೊಟ್ಟೆ ಭಾಗಕ್ಕೆ ಗಂಭೀರ ಸ್ವರೂಪದ ಗಾಯವಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಆಸ್ಪತ್ರೆಯೊಂದಕ್ಕೆ ಕರೆದೊಯ್ಯಲಾಗಿದೆ.ಉತ್ತರ ಪ್ರದೇಶ ಮೂಲದ ಅಬ್ದುಲ್ ಪಟ್ಟಣದ ರಥಬೀದಿಯಲ್ಲಿ ಅನಾಥಾಶ್ರಮಕ್ಕೆ ಚಂದಾ ವಸೂಲಿ ಮಾಡುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ಘಟನೆ ಸಂಬಂಧ ಆರೋಪಿ ಮನು ಎಂಬುವರನ್ನು ಬಂಧಿಸಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.ಘಟನೆ ಹಿನ್ನೆಲೆ: ಪಟ್ಟಣದಲ್ಲಿ ಹಿಂದೂ ಜಾಗರಣಾ ವೇದಿಕೆಯು ‘ಅಖಂಡ ಭಾರತ ಸಂಕಲ್ಪ ಯಾತ್ರೆ’ ಅಂಗವಾಗಿ ಭಾನುವಾರ ತಡರಾತ್ರಿ ಆಯೋಜಿಸಿದ್ದ ಪಂಜಿನ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಪ್ರವೀಣ್ ಪೂಜಾರಿ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ಹೋಗುವ ಸಂದರ್ಭದಲ್ಲಿ ಮೂವರು ಪ್ರಯಾಣಿಕರು ಆಟೊವನ್ನು ಬಾಡಿಗೆಗೆ ಪಡೆದಿದ್ದರು. ಮಾರ್ಗ ಮಧ್ಯೆ ಕುತ್ತಿಗೆ, ಹೊಟ್ಟೆ ಭಾಗಕ್ಕೆ ಚಾಕುವಿನಿಂದ ಇರಿದು ಹಲ್ಲೆ ನಡೆಸಿ ಪರಾರಿಯಾದರು. ಗಂಭೀರವಾಗಿ ಗಾಯಗೊಂಡಿದ್ದ ಪ್ರವೀಣ್ ರಕ್ತಸ್ರಾವದಿಂದ ಆಟೊದಲ್ಲೇ ಮೃತಪಟ್ಟಿದ್ದಾರೆ.ಕೊಲೆಯ ವಿಷಯ ಸೋಮವಾರ ಬೆಳಿಗ್ಗೆ ತಿಳಿಯುತ್ತಿದ್ದಂತೆ ಹಿಂದೂ ಜಾಗರಣ ವೇದಿಕೆ, ಬಜರಂಗದಳ, ಬಿಜೆಪಿ ಕಾರ್ಯಕರ್ತರು ಹಾಗೂ ಆಟೊ ಚಾಲಕರು ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಕುಶಾಲನಗರದ ಆಸ್ಪತ್ರೆ ಶವಾಗಾರದ ಎದುರು ಪ್ರತಿಭಟನೆ ನಡೆಸಿದರು.ದುಷ್ಕರ್ಮಿಗಳು ಪ್ರವೀಣ್‌ ಅವರನ್ನು ವ್ಯವಸ್ಥಿತ ರೀತಿಯಲ್ಲಿ ಕೊಲೆ ಮಾಡಿದ್ದಾರೆ. 24 ಗಂಟೆಯೊಳಗೆ ಪೊಲೀಸರು ಆರೋಪಿಗಳನ್ನು ಬಂಧಿಸಬೇಕು. ಇಲ್ಲದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಮನು ಮುತ್ತಪ್ಪ ಪ್ರತಿಭಟನಾ ಸ್ಥಳದಲ್ಲಿ ಎಚ್ಚರಿಕೆ ನೀಡಿದರು.ಉಸ್ತುವಾರಿ ಸಚಿವ ಎಂ.ಆರ್‌. ಸೀತಾ ರಾಂ ಸ್ಥಳಕ್ಕೆ ಬರಬೇಕು ಎಂದು ಪ್ರತಿಭಟ ನಾಕಾರರು ಪಟ್ಟು ಹಿಡಿದರು. ಬೆಳಿಗ್ಗೆ 8ರಿಂದ ಮಧ್ಯಾಹ್ನ 2ರ ವರೆಗೆ ನಿರಂತರ ಪ್ರತಿಭಟನೆ ನಡೆಯಿತು. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾ ಗಿತ್ತು. ಬಳಿಕ ಶಾಸಕ ಕೆ.ಜಿ.ಬೋಪಯ್ಯ ಮನವೊಲಿಸಿದರು. ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬ ಸ್ಥರಿಗೆ ಮೃತದೇಹ ಹಸ್ತಾಂತರಿಸಲಾಯಿತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.