ಬೆಂಗಳೂರು: ಆರರಿಂದ 14 ವರ್ಷದ ನಡುವಿನ ಮಕ್ಕಳು ಶಾಲೆಗಳಿಂದ ಹೊರಗುಳಿದ ಸಂದರ್ಭದಲ್ಲಿ, ಅವರನ್ನು ಮರಳಿ ಶಾಲೆಗೆ ಕರೆತರಲು ‘ಹಾಜರಾತಿ ಪ್ರಾಧಿಕಾರ’ ರಚನೆಗೆ ಅವಕಾಶ ಕಲ್ಪಿಸುವ ‘ಕರ್ನಾಟಕ ಕಡ್ಡಾಯ ಮತ್ತು ಉಚಿತ ಶಿಕ್ಷಣ ತಿದ್ದುಪಡಿ ನಿಯಮ – 2012’ ಅನ್ನು ಇನ್ನು 10 ದಿನಗಳಲ್ಲಿ ಗೆಜೆಟ್ನಲ್ಲಿ ಪ್ರಕಟಿಸಲಾಗುವುದು ಎಂದು ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ.

ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ (ಆರ್ಟಿಇ) ಜಾರಿಗೆ ಬಂದು ವರ್ಷಗಳು ಕಳೆದ ನಂತರವೂ ಸಾವಿರಾರು ಮಕ್ಕಳು ಶಾಲಾ ಶಿಕ್ಷಣದಿಂದ ವಂಚಿತರಾಗಿದ್ದಾರೆ ಎಂದು ಮಾಧ್ಯಮಗಳಲ್ಲಿ ಪ್ರಕಟವಾದ ವರದಿ ಆಧರಿಸಿ, ಮುಖ್ಯ ನ್ಯಾಯಮೂರ್ತಿ ಡಿ.ಎಚ್. ವಘೇಲಾ ಮತ್ತು ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರನ್ನು ಒಳಗೊಂಡ ವಿಭಾಗೀಯ ಪೀಠ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದೆ. ಇದರ ವಿಚಾರಣೆ ವೇಳೆ ವಿಭಾಗೀಯ ಪೀಠಕ್ಕೆ ಸರ್ಕಾರಿ ವಕೀಲರು, ‘ಹೊಸದಾಗಿ 30 ಸಾವಿರ ಮಕ್ಕಳನ್ನು ಶಾಲೆಗೆ ಸೇರಿಸಲಾಗಿದೆ’ ಎಂದು ವಿವರಿಸಿದರು. ವಿಚಾರಣೆಯನ್ನು ನ್ಯಾಯಪೀಠ ಏಪ್ರಿಲ್ 8ಕ್ಕೆ ಮುಂದೂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.