ಬುಧವಾರ, ಏಪ್ರಿಲ್ 21, 2021
25 °C

ಆರ್‌ಟಿಐಗೆ ಒಳಪಡಲು ಪಕ್ಷಗಳ ವಿರೋಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಮಾಹಿತಿ ಹಕ್ಕು ಕಾಯಿದೆ (ಆರ್‌ಟಿಐ) ವ್ಯಾಪ್ತಿಗೆ ಒಳಪಡಲು ಪ್ರಮುಖ ರಾಜಕೀಯ ಪಕ್ಷಗಳು ತೀವ್ರವಾಗಿ ವಿರೋಧಿಸಿವೆ.ಸರ್ಕಾರದಿಂದ ರಾಜಕೀಯ ಪಕ್ಷಗಳಿಗೆ ದೊರಕುತ್ತಿರುವ ಸೌಲಭ್ಯ ಮತ್ತು ಸಬ್ಸಿಡಿ ದರದಲ್ಲಿ ಕಟ್ಟಡಗಳನ್ನು ಬಾಡಿಗೆ ನೀಡಿದ ಮಾತ್ರಕ್ಕೆ ರಾಜಕೀಯ ಪಕ್ಷಗಳು ಆರ್‌ಟಿಐ ವ್ಯಾಪ್ತಿಗೆ ಒಳಪಡಬೇಕಿಲ್ಲ ಎಂದು ರಾಜಕೀಯ ಪಕ್ಷಗಳು ಖಾರವಾಗಿ ಪ್ರತಿಕ್ರಿಯಿಸಿವೆ.ಕೇಂದ್ರೀಯ ಮಾಹಿತಿ ಆಯೋಗ (ಸಿಐಸಿ) ಮುಖ್ಯ ಆಯುಕ್ತ ಸತ್ಯಾನಂದ ಮಿಶ್ರ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಪೂರ್ಣ ಪೀಠವು ರಾಜಕೀಯ ಪಕ್ಷಗಳನ್ನು ಆರ್‌ಟಿಐ ವ್ಯಾಪ್ತಿಗೆ ಒಳಪಡಿಸಬೇಕೇ ಅಥವಾ ಬೇಡವೇ ಎಂಬ ಕುರಿತು ನಿರ್ಧರಿಸಲು ಸಭೆ ನಡೆಸಿತು.ಸಂಘ- ಸಂಸ್ಥೆಗಳು ಸರ್ಕಾರದಿಂದ ಪ್ರತ್ಯಕ್ಷ ಇಲ್ಲವೆ ಪರೋಕ್ಷವಾಗಿ ಹಣಕಾಸು ನೆರವು ಪಡೆಯುತ್ತಿದ್ದರೆ ಅವು ಆರ್‌ಟಿಐ ಕಾಯಿದೆ ವ್ಯಾಪ್ತಿಗೆ ಒಳಪಡುತ್ತವೆ ಎಂದು ಆರ್‌ಟಿಐ ಕಾಯಿದೆ ಹೇಳುತ್ತದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.