ನವದೆಹಲಿ (ಪಿಟಿಐ): ಮಾಹಿತಿ ಹಕ್ಕು ಕಾಯ್ದೆಯಡಿ (ಆರ್ಟಿಐ) ಸ್ವಯಂ ಪ್ರೇರಣೆಯಿಂದ ಸಾರ್ವಜನಿಕವಾಗಿ ಬಹಿರಂಗ ಪಡಿಸಬೇಕಿದ್ದ ಮಾಹಿತಿಗಳನ್ನು ಸಮರ್ಪಕವಾಗಿ ಪ್ರಕಟಿಸುತ್ತಿಲ್ಲ ಎಂದು ಸರ್ಕಾರಿ ಇಲಾಖೆ/ಸಂಸ್ಥೆಗಳನ್ನು ಕೇಂದ್ರ ಮಾಹಿತಿ ಹಕ್ಕು ಆಯೋಗದ (ಸಿಐಸಿ) ಮುಖ್ಯ ಆಯುಕ್ತರು ತರಾಟೆಗೆ ತೆಗೆದುಕೊಂಡಿದ್ದಾರೆ.

`ಆರ್ಟಿಐ~ ಕಾಯ್ದೆಯ 4ನೇ ಅಧಿನಿಯಮದ ಅನ್ವಯ ಸ್ವಯಂ ಪ್ರೇರಣೆಯಿಂದಲೇ ಕಾಯ್ದೆಗೆ ಸಂಬಂಧಿಸಿದ ಮಾಹಿತಿಗಳನ್ನು ಸಾರ್ವಜನಿಕರಿಗೆ ತಿಳಿಸಬೇಕು. ಆದರೆ, ಈ ಕಾಯ್ದೆ ಜಾರಿಯಾಗಿ ಏಳು ವರ್ಷಗಳು ಕಳೆದರೂ ಬಹುತೇಕ ಸರ್ಕಾರಿ ಇಲಾಖೆ/ಸಂಸ್ಥೆಗಳು ಇದನ್ನು ಸಮರ್ಪಕವಾಗಿ ಅನುಷ್ಠಾನ ಮಾಡಿಲ್ಲ ಎಂದು ಮುಖ್ಯ ಮಾಹಿತಿ ಹಕ್ಕು ಆಯುಕ್ತ ಸತ್ಯಾನಂದ ಮಿಶ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಖಿಲ ಭಾರತ ಲೋಕಾಯುಕ್ತರ ಸಮಾವೇಶದಲ್ಲಿ ಶನಿವಾರ ಮಾತನಾಡಿದ ಅವರು, `ಅಧಿನಿಯಮದ ಅನ್ವಯ ಸರ್ಕಾರಿ ಇಲಾಖೆ/ಸಂಸ್ಥೆಗಳು `ಆರ್ಟಿಐ~ಗೆ ಸಂಬಂಧಿಸಿದ 17 ಅಂಶಗಳ ಮಾಹಿತಿಯನ್ನು ಅನುಕ್ರಮಣಿಕೆಯಂತೆ ಪಟ್ಟಿ ಮಾಡಿ 120 ದಿವಸಗಳಲ್ಲಿ ಪ್ರಕಟಿಸುವುದು ಕಡ್ಡಾಯ. `ಆರ್ಟಿಐ~ ಸಮರ್ಪಕವಾಗಿ ಅನುಷ್ಠಾನಗೊಂಡರೆ ಭ್ರಷ್ಟಾಚಾರಕ್ಕೂ ಕಡಿವಾಣ ಬೀಳುತ್ತದೆ~ ಎಂದರು.

ರಾಷ್ಟ್ರೀಯ ಸಲಹಾ ಮಂಡಳಿ ಸದಸ್ಯೆ ಅರುಣಾ ರಾಯ್ ಮಾತನಾಡಿ, `ಭ್ರಷ್ಟಾಚಾರ ತಡೆಗಟ್ಟಲು ಮತ್ತಷ್ಟು ಶಾಸನಗಳನ್ನು ರಚಿಸುವ ಅಗತ್ಯವಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.