ಸೋಮವಾರ, ಮೇ 23, 2022
21 °C

ಆರ್‌ಟಿಐ ಕಾರ್ಯಕರ್ತನ ಮೇಲೆ ಹಲ್ಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ (ಪಿಟಿಐ): ನಗರದ ಹೊರವಲಯದಲ್ಲಿರುವ ಖಾಂಡಿವಿಲಿಯಲ್ಲಿ ನಾಲ್ವರು ದುಷ್ಕರ್ಮಿಗಳು ಮಾಹಿತಿ ಹಕ್ಕು (ಆರ್‌ಟಿಐ) ಕಾರ್ಯಕರ್ತನ ಮೇಲೆ ದಾಳಿ ಮಾಡಿದ್ದು, ಇವರಲ್ಲಿ ಇಬ್ಬರು ಕ್ರಿಕೆಟ್ ಬುಕ್ಕಿಗಳೆಂದು ಶಂಕಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.ಶುಕ್ರವಾರ ರಾತ್ರಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮೆಹುಲ್ ಕಟಾರಿಯಾ (39) ಎಂಬಾತನ ಮೇಲೆ ನಾಲ್ವರು ಏಕಾಏಕಿ ಎರಗಿ, ಹಲ್ಲೆ ಮಾಡಿ, ನಂತರ ಪರಾರಿಯಾಗಿದ್ದಾರೆ. ಈ ಸಂದರ್ಭದಲ್ಲಿ ಕಟಾರಿಯನ ತಲೆ ಮತ್ತು ಹೊಟ್ಟೆಗೆ ತೀವ್ರ ಗಾಯಗಳಾಗಿವೆ. ತಕ್ಷಣ ಸಾರ್ವಜನಿಕರೇ ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಿ, ಚಿಕಿತ್ಸೆ ಕೊಡಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.