ಗುರುವಾರ , ಮೇ 13, 2021
38 °C

ಆರ್‌ಟಿಐ: ಸಮರ್ಪಕ ಜಾರಿಗೆ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಿಂಧನೂರು: ತಾಲ್ಲೂಕಿನಲ್ಲಿ ಶಿಕ್ಷಣ ಹಕ್ಕು ಕಾಯ್ದೆಯನ್ನು ಸಮರ್ಪಕವಾಗಿ ಜಾರಿಗೆಗೊಳಿಸುವಂತೆ ಆಗ್ರಹಿಸಿ ಸ್ಟೂಡೆಂಟ್ ಇಸ್ಲಾಮಿಕ್ ಆರ್ಗನೈಜೇಶನ್ ತಾಲ್ಲೂಕು ಸಮಿತಿ ಕಾರ್ಯಕರ್ತರು ತಹಸೀಲ್ದಾರ್ ಬಿ.ಟಿ.ಕುಮಾರಸ್ವಾಮಿ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.ರಾಜ್ಯದಲ್ಲಿ ಉಚಿತ ಶಿಕ್ಷಣ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಜಾರಿಯಾಗಿ ಮೂರು ವರ್ಷಗಳು ಗತಿಸಿದರೂ ಅದನ್ನು ಕಟ್ಟುನಿಟ್ಟಾಗಿ ಜಾರಿಗೆಗೊಳಿಸುವಲ್ಲಿ ಸರ್ಕಾರ ವಿಫಲವಾಗಿದೆ. ಇದರಿಂದಾಗಿ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಅವಕಾಶ ವಂಚಿತರಾಗುತ್ತಿದ್ದಾರೆ.

ಕೆಲ ಶಾಲೆಗಳು ಶಿಕ್ಷಣ ಹಕ್ಕು ಕಾಯ್ದೆಯ ಪ್ರಕಾರ ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ನೀಡದೆ ತಮ್ಮದು ಅಲ್ಪಸಂಖ್ಯಾತರ ಶಾಲೆಗಳೆಂದು ಸುಳ್ಳುವ ಹೇಳುವ ಮೂಲಕ ಅವಕಾಶದಿಂದ ವಂಚಿಸುತ್ತಿವೆ. ಗುಣಮಟ್ಟದ ಶಿಕ್ಷಣದ ಜೊತೆಗೆ ಪ್ರತಿ ಶಾಲೆಗೂ ಮೂಲಸೌಲಭ್ಯ ದೊರಕಿಸಿಕೊಡಬೇಕೆನ್ನುವ ನಿಯಮಗಳು ಸಂಪೂರ್ಣ ಉಲ್ಲಂಘನೆಯಾಗಿವೆ. ಈ ಬಗ್ಗೆ ಆಯಾ ಶಾಲೆಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಗಮನ ಸೆಳೆದರು.ಒಂದುವೇಳೆ ಅರ್ಹರಿಗೆ ಅವಕಾಶ ಕೊಡದೇ ಇದ್ದರೆ ದುರುಪಯೋಗವಾಗುವ ಸಾಧ್ಯತೆಗಳಿದ್ದು, ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮಕ್ಕೆ ಮುಂದಾಗಬೇಕು ಎಂದು ತಹಸೀಲ್ದಾರರಿಗೆ ಎಸ್‌ಐಒ ಪದಾಧಿಕಾರಿಗಳು ಆಗ್ರಹಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.