ರಾಯಚೂರು: ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರದ (ಆರ್ಟಿಪಿಎಸ್) 3 ಮತ್ತು 8 ನೇ ಘಟಕಗಳು ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸಿವೆ.

ಆವಿ ಪೂರೈಕೆಯ ಟ್ಯೂಬ್ನಲ್ಲಿ ಆವಿ ಸೋರಿಕೆ ಕಂಡು ಬಂದಿದ್ದರಿಂದ 3ನೇ ಘಟಕದಲ್ಲಿ ವಿದ್ಯುತ್ ಉತ್ಪಾದನೆಯನ್ನು ಸೋಮವಾರ ಸ್ಥಗಿತಗೊಳಿಸಲಾಗಿತ್ತು. ಈ ಘಟಕ ದುರಸ್ತಿ ಕಾರ್ಯ ಪ್ರಗತಿಯಲ್ಲಿದ್ದು, ಬುಧವಾರ ಆರಂಭಗೊಳ್ಳುವ ನಿರೀಕ್ಷೆ ಇದೆ.

250 ಮೆಗಾವಾಟ್ ವಿದ್ಯುತ್ ಉತ್ಪಾದನೆ ಸಾಮರ್ಥ್ಯದ 8ನೇ ಘಟಕದ ಟ್ಯೂಬ್ನಲ್ಲೂ ಆವಿ ಸೋರಿಕೆ ಮಂಗಳವಾರ ಕಂಡುಬಂದ ಹಿನ್ನೆಲೆಯಲ್ಲಿ ಈ ಘಟಕದಲ್ಲೂ ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸಲಾಗಿದೆ. ಸದ್ಯ 19,000 ಮೆಟ್ರಿಕ್ ಟನ್ ಕಲ್ಲಿದ್ದಲು ಸಂಗ್ರಹ ಇದೆ. 1200 ಮೆಗಾವಾಟ್ ವಿದ್ಯುತ್ ಉತ್ಪಾದನೆ ಇದೆ ಎಂದು ಆರ್ಟಿಪಿಎಸ್ನ ಕಾರ್ಯನಿರ್ವಾಹಕ ನಿರ್ದೇಶಕ ಭಾಸ್ಕರ್ ಪ್ರಜಾವಾಣಿಗೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.