ಮಂಗಳವಾರ, ಏಪ್ರಿಲ್ 20, 2021
26 °C

ಆರ್‌ಟಿಪಿಎಸ್: 2 ಘಟಕಗಳು ಪುನರಾರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಬಾಯ್ಲರ್ ಕೊಳವೆಯಲ್ಲಿ ಆವಿ ಸೋರಿಕೆ ಕಂಡು ಬಂದಿದ್ದರಿಂದ ಎರಡು ದಿನದ ಹಿಂದೆ ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸಿದ್ದ ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರದ (ಆರ್‌ಟಿಪಿಎಸ್) ಒಂದು ಮತ್ತು 7ನೇ ಘಟಕಗಳು ಮತ್ತೆ ಗುರುವಾರ ವಿದ್ಯುತ್ ಉತ್ಪಾದನೆ ಆರಂಭಿಸಿವೆ.ಆರ್‌ಟಿಪಿಎಸ್‌ನ 1ರಿಂದ 7ರವರೆಗಿನ ಎಲ್ಲ ಘಟಕಗಳು ವಿದ್ಯುತ್ ಉತ್ಪಾದನೆಯಲ್ಲಿ ತೊಡಗಿವೆ. ಗುರುವಾರ 1,300 ಮೆಗಾವಾಟ್ ವಿದ್ಯುತ್ ಉತ್ಪಾದನೆ ಆಗಿದೆ. 8ನೇ ಘಟಕ ದುರಸ್ತಿ ಕಾರ್ಯ ಮುಂದುವರಿದಿದೆ ಎಂದು ಆರ್‌ಟಿಪಿಎಸ್ ಮೂಲಗಳು ಹೇಳಿವೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.