ಶುಕ್ರವಾರ, ಮೇ 14, 2021
21 °C

ಆಲೂಗಡ್ಡೆ ಬೆಳೆ ಹಾನಿ: ಪರಿಹಾರಕ್ಕೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಆಲೂಗಡ್ಡೆ ಬೆಳೆ ಹಾನಿ: ಪರಿಹಾರಕ್ಕೆ ಒತ್ತಾಯ

ಬೆಳಗಾವಿ: ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ಅಪಾರ ನಷ್ಟವನ್ನು ಅನುಭವಿಸಿರುವ ಆಲೂಗಡ್ಡೆ ಬೆಳೆಗಾರರಿಗೆ ಸೂಕ್ತ ಪರಿಹಾರ ವಿತರಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಕರ್ತರು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರನ್ನು ಒತ್ತಾಯಿಸಿದರು.ಬೆಳಗಾವಿಗೆ ಸೋಮವಾರ ಆಗಮಿಸಿದ್ದ ಸಚಿವರನ್ನು ಭೇಟಿ ಮಾಡಿದ ಸಂಘದ ಕಾರ್ಯಕರ್ತರು ಮನವಿ ಸಲ್ಲಿಸಿದರು.`ಈ ಕುರಿತು 250ಕ್ಕೂ ಹೆಚ್ಚು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಆದರೆ, ಏನೂ ಪ್ರಯೋಜನವಾಗಿಲ್ಲ. ಹೀಗಾಗಿ ಅಪಾರ ನಷ್ಟ ಅನುಭವಿಸಿರುವ ಆಲೂಗಡ್ಡೆ ಬೆಳೆಗಾರರು ಅತಂತ್ರ ಸ್ಥಿತಿಗೆ ಸಿಲುಕಿದ್ದಾರೆ. ಸರ್ಕಾರವು ಈಗ ಪರಿಹಾರ ನೀಡದಿದ್ದರೆ ಆತ್ಮಹತ್ಯೆಯೇ ಗತಿ. ಹೀಗಾಗಿ ಪರಿಸ್ಥಿತಿಯನ್ನು ಅರಿತು ಶೀಘ್ರವೇ ಪರಿಹಾರವನ್ನು ನೀಡಬೇಕು' ಎಂದು ಒತ್ತಾಯಿಸಿದರು.`333 ರೈತರ ಹೆಸರಿನಲ್ಲಿ ವಿವಿಧ ಸೊಸೈಟಿ ಹಾಗೂ ಬ್ಯಾಂಕ್‌ಗಳಲ್ಲಿ ಇರುವ 3 ಕೋಟಿ ರೂಪಾಯಿ ಸಾಲವನ್ನು ಸರ್ಕಾರವು ಕೂಡಲೇ ಭರಿಸಬೇಕು' ಎಂದು ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಅಪ್ಪಾಸಾಹೇಬ ದೇಸಾಯಿ ಒತ್ತಾಯಿಸಿದರು. ಕೆ.ಬಿ. ಪಾಟೀಲ, ಯಲಗೌಡ ಪಾಟೀಲ, ಬಸವರಾಜ ಪಾಟೀಲ ಮತ್ತಿತರರು ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.